ADVERTISEMENT

‘ಪರಭಾಷಿಕರಿಗೆ ಕನ್ನಡ ಕಲಿಕೆ ಅಭಿಯಾನ’

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2014, 19:30 IST
Last Updated 19 ಅಕ್ಟೋಬರ್ 2014, 19:30 IST
ದಾಸರಹಳ್ಳಿ ಕನ್ನಡ ಸಾಹಿತ್ಯ ಪರಿಷತ್ತು, ದಿವ್ಯ ಜ್ಯೋತಿ ಜಾಗೃತಿ ಸಂಸ್ಥಾನ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸಂಯುಕ್ತ ಆಶ್ರಯದಲ್ಲಿ ದಾಸರಹಳ್ಳಿಯ ದಿವ್ಯಜ್ಯೋತಿ ಧ್ಯಾನ ಮಂದಿರದಲ್ಲಿ ಆಯೋಜಿಸಿದ್ಧ ಕಾರ್ಯಕ್ರಮದಲ್ಲಿ ಕಲಾವಿದರು ಡೊಳ್ಳು ಕುಣಿತ ಪ್ರದರ್ಶಿಸಿದರು

ಪೀಣ್ಯ ದಾಸರಹಳ್ಳಿ: ‘ಪರ ಭಾಷಿಕರು ಕನ್ನಡ ಕಲಿಯುವ ಮೂಲಕ ಕರ್ನಾಟಕ ಭಾವೈಕ್ಯತೆಯನ್ನು ಸವಿಯಲು ಸಹಕಾರಿಯಾಗುತ್ತದೆ’ ಎಂದು ಶಾಸಕ ಎಸ್‌.ಮುನಿರಾಜು ಹೇಳಿದರು.

ದಾಸರಹಳ್ಳಿ ಕನ್ನಡ ಸಾಹಿತ್ಯ ಪರಿಷತ್ತು, ದಿವ್ಯ ಜ್ಯೋತಿ ಜಾಗೃತಿ ಸಂಸ್ಥಾನ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸಂಯುಕ್ತ ಆಶ್ರಯದಲ್ಲಿ ದಾಸರ ಹಳ್ಳಿಯ ದಿವ್ಯಜ್ಯೋತಿ ಧ್ಯಾನ ಮಂದಿ ರದಲ್ಲಿ ಭಾನುವಾರ ಆಯೋಜಿಸಿದ್ಧ ‘ಪರಭಾಷಿಕರಿಗೆ ಕನ್ನಡ ಕಲಿಕೆ ಅಭಿಯಾನ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

‘ಅನ್ಯ ಭಾಷಿಕರು ಕನ್ನಡ ಕಲಿಯುವು ದರಿಂದ ವ್ಯವಹಾರ ಮಾಡಲು ಸಹಕಾರಿಯಾಗುವುದರ ಜೊತೆಗೆ ನಾಡಿನ ನೆಲ ಜಲ ಗುಣಗಳ ಬಗ್ಗೆ ತಿಳಿಯಬಹುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.