ADVERTISEMENT

‘ವ್ಯಕ್ತಿತ್ವವೇ ಪ್ರಧಾನ’

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2015, 20:18 IST
Last Updated 31 ಮಾರ್ಚ್ 2015, 20:18 IST

ಬೆಂಗಳೂರು: ವಿದ್ಯಾರ್ಥಿಗಳ ಯಶಸ್ಸಿಗೆ ಅವರಲ್ಲಿನ ವ್ಯಕ್ತಿತ್ವವೇ ಪ್ರಧಾನವಾಗಿರುತ್ತದೆ ಎಂದು ಕೆನರಾ ಬ್ಯಾಂಕ್ ಸ್ಕೂಲ್ ಆಫ್ ಮ್ಯಾನೇಜ್‌ಮೆಂಟ್‌ನ ಡೀನ್‌ ಡಾ.ಎಂ.ಕೆ.ಶ್ರೀಧರ್‌ ಹೇಳಿದರು.

ಬೆಂಗಳೂರು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಮಂಗಳವಾರ ನಡೆದ ವ್ಯಕ್ತಿತ್ವ ವಿಕಸನ ತರಬೇತಿ ಶಿಬಿರದ ಸಮಾರೋಪದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ಅವರ ಅಂತಃಕರಣದಲ್ಲಿಯೇ ಅಂತರ್ಗತವಾಗಿರುತ್ತದೆ. ಅದನ್ನು ಎಲ್ಲಿಯೋ ಹುಡುಕಿಕೊಂಡು ಹೋದರೆ ಸಿಗದು. ಈ ಶಿಬಿರಗಳಲ್ಲಿ ಸಿಗುವ ತರಬೇತಿಯ ಅನುಭವಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನಲ್ಲಿ ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ವಿವಿಯ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ.ಬಿ.ಕೆ. ರವಿ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನಾ ಶಿಬಿರಗಳು  ವಿದ್ಯಾರ್ಥಿಗಳ ಪ್ರೌಢಿಮೆಗೆ ಅಡಿಪಾಯ ಹಾಕಬಲ್ಲವು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.