ADVERTISEMENT

‘ಸಂಘಟನೆಗಳೆಲ್ಲ ಒಂದಾಗಿ ಸ್ಪರ್ಧಿಸಬೇಕು’

​ಪ್ರಜಾವಾಣಿ ವಾರ್ತೆ
Published 30 ಜೂನ್ 2015, 19:54 IST
Last Updated 30 ಜೂನ್ 2015, 19:54 IST

ಬೆಂಗಳೂರು: ‘ಬಿಬಿಎಂಪಿ ಚುನಾವಣೆಯಲ್ಲಿ ಕನ್ನಡ ಪರ ಸಂಘಟನೆಗಳೆಲ್ಲ ಒಂದುಗೂಡಿ ಕನಿಷ್ಠ 50 ಅಭ್ಯರ್ಥಿಗಳನ್ನಾದರೂ ಗೆಲ್ಲಿಸಲು ಪಣ ತೊಡಬೇಕು’ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್  ಹೇಳಿದರು.

ಕೆ.ಆರ್ ಪುರದಲ್ಲಿ ಮಂಗಳವಾರ ಆಯೋಜಿಸಿದ್ದ ಪಕ್ಷದ ಶಾಖೆ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು.

‘ನಗರದಲ್ಲಿ ದಿನೇ ದಿನೇ ಅನ್ಯಭಾಷಿಕರು ಪ್ರಭಾವಿಗಳಾಗುತ್ತ, ಕನ್ನಡಿಗರು ಅಲ್ಪಸಂಖ್ಯಾತರಾಗುತ್ತಿದ್ದಾರೆ. ಪರಿಸ್ಥಿತಿ ಹೀಗೆ ಮುಂದುವರಿ
ದರೆ ಎಲ್ಲ ಅಧಿಕಾರಗಳು ಕನ್ನಡಿಗರ ಕೈತಪ್ಪಲಿವೆ. ಪರಕೀಯರ ಪ್ರಾಬಲ್ಯ ಹೆಚ್ಚುತ್ತದೆ. ಇದನ್ನು ತಪ್ಪಿಸಬೇಕು.

ಕನ್ನಡ ಭಾಷೆಯ ಅಭಿವೃದ್ಧಿಗಾಗಿ ಸಂಘಟನೆಗಳು ಬಿನ್ನಾಭಿಪ್ರಾಯಗಳನ್ನು ಮರೆತು ಒಂದಾಗಬೇಕು’ ಎಂದು ತಿಳಿಸಿದರು.
‘ರಾಷ್ಟ್ರೀಯ ಪಕ್ಷಗಳು ಚುನಾವಣೆಯಲ್ಲಿ ಕನ್ನಡ ಪರ ಸಂಘಟನೆಗಳ ಬೆಂಬಲಿತ ಅಭ್ಯರ್ಥಿ ಎದುರು ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಬಾರದು. ಸಂಘಟನೆಯ ಅಭ್ಯರ್ಥಿಗೆ ಪ್ರೋತ್ಸಾಹ ನೀಡಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.