ADVERTISEMENT

‘ಸುಪ್ರೀಂ’ಗೆ ಮೇಲ್ಮನವಿ ಸರಿಯಲ್ಲ

ದೇವೇಗೌಡ, ಎಸ್‌.ಎಂ.ಕೃಷ್ಣ ಅಭಿಪ್ರಾಯ

​ಪ್ರಜಾವಾಣಿ ವಾರ್ತೆ
Published 30 ಜೂನ್ 2015, 19:56 IST
Last Updated 30 ಜೂನ್ 2015, 19:56 IST

ಬೆಂಗಳೂರು: ‘ಬಿಬಿಎಂಪಿ ಚುನಾವಣೆ ಮುಂದೂಡುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ಗೆ  ಮೇಲ್ಮನವಿ ಸಲ್ಲಿಸಿರುವುದು ಸರಿಯಲ್ಲ’ ಎಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರು ಅಭಿಪ್ರಾಯಪಟ್ಟರು.

ಮಂಗಳವಾರ ನಗರದಲ್ಲಿ ಆಯೋಜಿಸಿದ್ದ ಕೆ.ವಿ. ಶಂಕರಗೌಡ ಅವರ ಸಂಸ್ಮರಣಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಕ್ಕೂ ಮುನ್ನ ಈ ಇಬ್ಬರೂ ನಾಯಕರು ಪ್ರತ್ಯೇಕವಾಗಿ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಬಿಬಿಎಂಪಿ ಚುನಾವಣೆಗೆ ಈಗಾಗಲೇ ವೇಳಾಪಟ್ಟಿ ಘೋಷಣೆ ಆಗಿರುವುದರಿಂದ ಚುನಾವಣೆ ನಡೆಯುತ್ತದೆ’ ಎಂದು ದೇವೇಗೌಡ ಅಭಿಪ್ರಾಯಪಟ್ಟರು.

‘ಚುನಾವಣೆ ಮುಂದೂಡಲು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿರುವುದು ಸರಿಯಲ್ಲ’ ಎಂದು ಕೃಷ್ಣ  ಅವರು ಹೇಳಿದರು.

ರೈತರು ಭಾವಾವೇಶಕ್ಕೆ ಒಳಗಾಗದಿರಿ: ‘ಸಂಕಷ್ಟದ ಪರಿಸ್ಥಿತಿಯಲ್ಲಿ ರೈತರು ಭಾವಾವೇಶಕ್ಕೆ ಒಳಗಾಗಿ ಜೀವ ತ್ಯಜಿಸುವಂತಹ ತಪ್ಪು ತೀರ್ಮಾನ ಕೈಗೊಳ್ಳಬಾರದು. ಆತ್ಮಸ್ಥೈರ್ಯದಿಂದ ಇರಬೇಕು’ ಎಂದು ದೇವೇಗೌಡ ಮನವಿ ಮಾಡಿದರು.

‘ರೈತರ ಆತ್ಮಹತ್ಯೆ ದುರದೃಷ್ಟಕರ, ಅಹಿತಕರ’ ಎಂದು ಕೃಷ್ಣ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.