ADVERTISEMENT

198 ವಾರ್ಡ್‌ ಸಮಿತಿ ರಚನೆ

​ಪ್ರಜಾವಾಣಿ ವಾರ್ತೆ
Published 19 ಜುಲೈ 2017, 20:03 IST
Last Updated 19 ಜುಲೈ 2017, 20:03 IST

ಬೆಂಗಳೂರು: ‘ಈಗಾಗಲೇ 198 ವಾರ್ಡ್‌  ಸಮಿತಿ ರಚಿಸಲಾಗಿದ್ದು, ಇದಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಎರಡು ವಾರಗಳಲ್ಲಿ ಕೋರ್ಟ್‌ಗೆ ಸಲ್ಲಿಸಲಾಗುವುದು’ ಎಂದು ಬಿಬಿಎಂಪಿಗೆ ಹೈಕೋರ್ಟ್‌ಗೆ ತಿಳಿಸಿದೆ.

ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಬಿಬಿಎಂಪಿ ವಕೀಲ ಕೆ.ಎನ್‌.ಪುಟ್ಟೇಗೌಡ ಅವರು, ನ್ಯಾಯಮೂರ್ತಿಗಳಾದ ಜಯಂತ್ ಪಟೇಲ್ ಹಾಗೂ ಎಸ್‌.ಸುಜಾತ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಈ ಕುರಿತು ವಿವರಿಸಿದರು.

‘ಹಲವೆಡೆ ಪಾಲಿಕೆ ಸದಸ್ಯರು ಮಾರ್ಷಲ್‌ಗಳ ಕರ್ತವ್ಯ ನಿರ್ವಹಣೆಗೆ ಅಡ್ಡಿ ಉಂಟುಮಾಡುತ್ತಿದ್ದಾರೆ. ಈ ಸಂಬಂಧ ವಿವಿಧೆಡೆ 14 ಎಫ್‌ಐಆರ್‌ ದಾಖಲು ಮಾಡಲಾಗಿದೆ.  ಪಾಲಿಕೆ ಸದಸ್ಯರ ಹತ್ತಿರದ ಬಂಧುಗಳೇ ವಾರ್ಡ್ ಸಮಿತಿ ಸದಸ್ಯರಾಗಿದ್ದಾರೆ’ ಎಂದು ಕೆಲವು ಅರ್ಜಿದಾರರು ಆರೋಪಿಸಿದರು.

ADVERTISEMENT

‘ಇದಕ್ಕೆ ಸಂಬಂಧಿಸಿದಂತೆ  ನಿಮ್ಮ ಬಳಿ ಇರುವ ಸಾಕ್ಷ್ಯಗಳನ್ನು ಕೋರ್ಟ್‌ಗೆ ಮುಂದಿನ ವಿಚಾರಣೆ ವೇಳೆ ಹಾಜರುಪಡಿಸಿ’ ಎಂದು ನ್ಯಾಯಪೀಠ ಅರ್ಜಿದಾರರಿಗೆ ಸೂಚಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.