ADVERTISEMENT

20 ಸಾವಿರ ಪ್ರಕರಣ ಇತ್ಯರ್ಥ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2016, 20:05 IST
Last Updated 13 ಫೆಬ್ರುವರಿ 2016, 20:05 IST

ಬೆಂಗಳೂರು: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು 15 ಜಿಲ್ಲೆಗಳ ವ್ಯಾಪ್ತಿಯಲ್ಲಿ ಶನಿವಾರ ನಡೆಸಿದ ಲೋಕ ಅದಾಲತ್ ಮೂಲಕ ಒಟ್ಟು 20,118 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ.

ಇವುಗಳಲ್ಲಿ ನ್ಯಾಯಾಲಯದಲ್ಲಿ ಬಾಕಿ ಇದ್ದ ಪ್ರಕರಣಗಳ ಸಂಖ್ಯೆ 3,650. ವ್ಯಾಜ್ಯಪೂರ್ವ ಪ್ರಕರಣಗಳ ಸಂಖ್ಯೆ 16,468.

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಶನಿವಾರ ಚುನಾವಣೆ ನಡೆದ ಜಿಲ್ಲೆಗಳಲ್ಲಿ ಲೋಕ ಅದಾಲತ್‌ ನಡೆದಿಲ್ಲ. ಈ ಜಿಲ್ಲೆಗಳಲ್ಲಿ ಫೆಬ್ರುವರಿ 21ರಂದು ಲೋಕ ಅದಾಲತ್ ನಡೆಯಲಿದೆ ಎಂದು ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.