ADVERTISEMENT

505 ಮಂದಿ ವಿರುದ್ಧ ಮೊಕದ್ದಮೆ

ರಾಜ್ಯದಲ್ಲಿ ನಕಲಿ ಜಾತಿ ಪ್ರಮಾಣಪತ್ರ

​ಪ್ರಜಾವಾಣಿ ವಾರ್ತೆ
Published 23 ಜುಲೈ 2014, 19:39 IST
Last Updated 23 ಜುಲೈ 2014, 19:39 IST

ಬೆಂಗಳೂರು: ರಾಜ್ಯದಲ್ಲಿ ಸುಳ್ಳು ಜಾತಿ ಪ್ರಮಾಣಪತ್ರ ಪಡೆದ 505 ಮಂದಿಯ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಾಗಿದೆ ಎಂದು ಕಂದಾಯ ಸಚಿವ ವಿ.ಶ್ರೀನಿವಾಸ ಪ್ರಸಾದ್‌ ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ಬುಧವಾರ ಬಿಜೆಪಿಯ ರಘುನಾಥ ರಾವ್‌ ಮಲ್ಕಾಪುರೆ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿ, ಬೆಂಗಳೂರು ಕೇಂದ್ರದಲ್ಲಿ 76, ಬೆಂಗಳೂರು ಪ್ರಾದೇಶಿಕದಲ್ಲಿ 42, ಬೆಳಗಾವಿ ಪ್ರಾದೇಶಿಕ ವಿಭಾಗದಲ್ಲಿ 31, ಮೈಸೂರು ಪ್ರಾದೇಶಿಕ ವಿಭಾಗದಲ್ಲಿ 19, ಮಂಗಳೂರು ಪ್ರಾದೇಶಿಕದಲ್ಲಿ 144, ದಾವಣಗೆರೆ 92, ಗುಲ್ಬರ್ಗದಲ್ಲಿ 101 ಮಂದಿಯ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ ಎಂದರು.

ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ನಕಲಿ ಜಾತಿ ಹಾಗೂ ಆದಾಯ ಪ್ರಮಾಣಪತ್ರ ಪಡೆದು ಪ್ರವೇಶ ಪಡೆದ ಆರೋಪ ಕೇಳಿ ಬಂದ ಕಾರಣದಿಂದ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರನ್ನು ಕೋರಲಾಗಿತ್ತು.

ದಾಳಿ, ತನಿಖಾ ಕೆಲಸಗಳ ಒತ್ತಡದಿಂದ ಈ ತನಿಖೆಯನ್ನು ನಡೆಸಲು ಸಾಧ್ಯವಿಲ್ಲ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ. ಹೀಗಾಗಿ ತಾಲ್ಲೂಕು ಮಟ್ಟದಲ್ಲೇ ತನಿಖೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.