ADVERTISEMENT

‘ಪರಿಷ್ಕೃತ ಮಹಾ ಯೋಜನೆಯಲ್ಲಿ ಮಕ್ಕಳ ಕಡೆಗಣನೆ’

​ಪ್ರಜಾವಾಣಿ ವಾರ್ತೆ
Published 23 ಜನವರಿ 2018, 19:51 IST
Last Updated 23 ಜನವರಿ 2018, 19:51 IST
ಬೆಂಗಳೂರು ಮಕ್ಕಳ ವೇದಿಕೆಯ ಸದಸ್ಯರು –ಪ್ರಜಾವಾಣಿ ಚಿತ್ರ
ಬೆಂಗಳೂರು ಮಕ್ಕಳ ವೇದಿಕೆಯ ಸದಸ್ಯರು –ಪ್ರಜಾವಾಣಿ ಚಿತ್ರ   

ಬೆಂಗಳೂರು: ಮಕ್ಕಳನ್ನು ಗಣನೆಗೆ ತೆಗೆದುಕೊಳ್ಳದೆ ನಗರ ಪರಿಷ್ಕೃತ ಮಹಾ ಯೋಜನೆ–2031ರ ಕರಡು ಸಿದ್ಧಪಡಿಸಲಾಗಿದೆ ಎಂದು ಬೆಂಗಳೂರು ಮಕ್ಕಳ ವೇದಿಕೆ ಅಸಮಾಧಾನ ವ್ಯಕ್ತಪಡಿಸಿದೆ.

ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿದ್ಯಾರ್ಥಿನಿ ಲಕ್ಷ್ಮಿ, ‘ಈ ಕರಡಿನಲ್ಲಿ ಮಕ್ಕಳಿಗೆ ಸಂಬಂಧಿಸಿದ ಯಾವುದೇ ನಿರ್ದಿಷ್ಟ ವಿಷಯಗಳು ಇಲ್ಲ. ಅಲ್ಲದೆ, ನಮ್ಮ ಬೇಕು ಬೇಡಗಳನ್ನು ತಿಳಿಯುವ ಯಾವ ಪ್ರಯತ್ನವನ್ನೂ ಮಾಡಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದಳು.

‘ಸರ್ಕಾರ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿದೆ. ನನ್ನ ತಂದೆ ತಾಯಿ ಗಾರೆ ಕೆಲಸ ಮಾಡುತ್ತಾರೆ. ನಮ್ಮಂಥವರು ಖಾಸಗಿ ಶಾಲೆಯಲ್ಲಿ ಕಲಿಯುವುದು ಕಷ್ಟ. ಆದ್ದರಿಂದ ಸರ್ಕಾರಿ ಶಾಲೆಗಳ ಶಿಕ್ಷಣದ ಗುಣಮಟ್ಟ ಹೆಚ್ಚಿಸಿ, ಹೆಚ್ಚು ಶಾಲೆಗಳನ್ನು ತೆರೆಯಬೇಕು. ಇದರಿಂದ ಎಷ್ಟೋ ಬಡ ಜನರಿಗೆ ಉಪಯೋಗವಾಗುತ್ತದೆ’ ಎಂದಳು.

ADVERTISEMENT

ಲಗ್ಗೆರೆಯ ವಿದ್ಯಾರ್ಥಿನಿ ಯಂಕಮ್ಮ ಮಾತನಾಡಿ, ‘ಮಕ್ಕಳ ಸಾಮರ್ಥ್ಯವನ್ನು ಗುರುತಿಸಲು ಸಾಂಸ್ಕೃತಿಕ ಕೇಂದ್ರಗಳು, ಕ್ರೀಡಾಂಗಣ ಹಾಗೂ ಗ್ರಂಥಾಲಯಗಳನ್ನು ನಿರ್ಮಿಸಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ತೆರೆಯಬೇಕು’ ಎಂದು ಒತ್ತಾಯಿಸಿದಳು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.