ADVERTISEMENT

‘ಕರ್ನಾಟಕ ಮರಗಳ ಸಂರಕ್ಷಣೆ ಕಾಯ್ದೆ ತಿದ್ದುಪಡಿ ಬೇಡ’

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2018, 19:30 IST
Last Updated 21 ಫೆಬ್ರುವರಿ 2018, 19:30 IST

ಬೆಂಗಳೂರು: ಕರ್ನಾಟಕ ಮರಗಳ ಸಂರಕ್ಷಣೆ (ತಿದ್ದುಪಡಿ) ಮಸೂದೆ– 2018 ಅನ್ನು ವಾಪಸ್‌ ಪಡೆಯಬೇಕು ಎಂದು ನಿವೃತ್ತ ನ್ಯಾಯಮೂರ್ತಿ ಎಂ.ಎಫ್‌.ಸಲ್ಡಾನ ಒತ್ತಾಯಿಸಿದರು.

ಬುಧವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘50ಕ್ಕೂ ಹೆಚ್ಚು ಜಾತಿಯ ಮರಗಳನ್ನು ಅನುಮತಿ ಪಡೆಯದೆ ರೈತರ ಭೂಮಿಯಲ್ಲಿ ಕಡಿಯುವುದಕ್ಕೆ ವಿನಾಯಿತಿ ನೀಡುವ ಉದ್ದೇಶದಿಂದ ಈ ಮಸೂದೆ ಮಂಡಿಸಲಾಗಿದೆ. ಈ ತಿದ್ದುಪಡಿ ಕಾಯ್ದೆ ಅವೈಜ್ಞಾನಿಕವಾಗಿದೆ. ಪ್ರತಿಯೊಂದು ಪ್ರಭೇದದ ಮರಗಳೂ ಒಂದೊಂದು ರೀತಿಯ ಮಹತ್ವ ಹೊಂದಿವೆ. ಈ ಕಾಯ್ದೆ ಜಾರಿಗೆ ಬಂದರೆ ‘ಕರ್ನಾಟಕ ಮರಗಳ ಸಂರಕ್ಷಣೆ ಕಾಯ್ದೆ 1976’ಕ್ಕೆ ಚ್ಯುತಿ ಉಂಟಾಗುತ್ತದೆ. ಚುನಾವಣೆ ಹತ್ತಿರವಿರುವುದರಿಂದ ಅಕ್ರಮ ಹಣ ಸಂಗ್ರಹಿಸಲು ಮಾಡಿರುವ ಹುನ್ನಾರ’ ಎಂದು ಆರೋಪಿಸಿದರು.

ಮರ ವಿಜ್ಞಾನಿ ವಿಜಯ್‌ ನಿಶಾಂತ್‌ ಮಾತನಾಡಿ, ‘ಈ ತಿದ್ದುಪಡಿ ಮಸೂದೆ ಜಾರಿಗೆ ತರದಂತೆ ಒತ್ತಾಯಿಸಿ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರಿಗೆ ಪತ್ರ ಬರೆಯಲಾಗಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.