ADVERTISEMENT

₹842 ಕೋಟಿ ಮೊತ್ತದ ಅವ್ಯವಹಾರ ಬಿಎಂಟಿಎಫ್‌ ನೋಟಿಸ್‌ಗೆ ತಡೆ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2017, 19:50 IST
Last Updated 23 ಮಾರ್ಚ್ 2017, 19:50 IST
ಬೆಂಗಳೂರು: ₹842 ಕೋಟಿ ಮೊತ್ತದ  ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ (ಕೆಆರ್‌ಐಡಿಎಲ್‌) ಕಾರ್ಯನಿರ್ವಾಹಕ ಎಂಜಿನಿಯರ್‌ ಎನ್‌.ಬಾಲಸುಬ್ರಹ್ಮಣ್ಯಂ ಅವರಿಗೆ ಬೆಂಗಳೂರು ಮಹಾನಗರ ಕಾರ್ಯಪಡೆ (ಬಿಎಂಟಿಎಫ್‌) ನೀಡಿರುವ ಷೋಕಾಸ್‌ ನೋಟಿಸ್‌ಗೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ.
 
ನೋಟಿಸ್‌ ನೀಡಿರುವುದನ್ನು ಪ್ರಶ್ನಿಸಿ ಬಾಲಸುಬ್ರಹ್ಮಣ್ಯಂ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎ.ಎಸ್‌.ಬೋಪಣ್ಣ ಅವರಿದ್ದ ಏಕಸದಸ್ಯ ಪೀಠ ಗುರುವಾರ ವಿಚಾರಣೆ  ನಡೆಸಿತು. ಪ್ರತಿವಾದಿಗಳಾದ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಬಿಎಂಟಿಎಫ್‌ಗೆ ನೋಟಿಸ್‌ ಜಾರಿಗೆ ನ್ಯಾಯಪೀಠ ಆದೇಶಿಸಿದೆ.
 
‘ಕೆ.ಆರ್‌.ಪುರಂ ವಿಧಾನಸಭಾ ಕ್ಷೇತ್ರದಲ್ಲಿ 2013ರಿಂದ 2016ರವರೆಗೆ ನಡೆದ ಕಾಮಗಾರಿಗಳಲ್ಲಿ ₹ 842 ಕೋಟಿ ಅವ್ಯವಹಾರ ನಡೆದಿದೆ’ ಎಂದು ಆರೋಪಿಸಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಅಂದಿನ ಸದಸ್ಯ ಎನ್‌.ಆರ್. ರಮೇಶ್‌ ಬಿಎಂಟಿಎಫ್‌ಗೆ ದೂರು ನೀಡಿದ್ದರು.
 
ಈ ದೂರಿನ ಅನುಸಾರ 2017ರ ಫೆಬ್ರುವರಿ 22ರಂದು ವಿಚಾರಣೆಗೆ ಹಾಜರಾಗುವಂತೆ ಬಿಎಂಟಿಎಫ್‌ ಡಿವೈಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಷೋಕಾಸ್ ನೋಟಿಸ್‌ ನೀಡಿದ್ದರು. 
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.