ADVERTISEMENT

ಲಂಡನ್‌ಗೆ ತೆರಳಲು ನಲಪಾಡ್‌ ಸಜ್ಜು

ಜಾಮೀನು ಷರತ್ತು ಸಡಿಲಿಸಲು ಕೋರಿ ಅರ್ಜಿ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2018, 19:58 IST
Last Updated 23 ಆಗಸ್ಟ್ 2018, 19:58 IST
   

ಬೆಂಗಳೂರು: ಉದ್ಯಮಿ ಲೋಕನಾಥ್‌ ಅವರ ಪುತ್ರ ವಿದ್ವತ್ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಶಾಸಕ ಎನ್.ಎ. ಹ್ಯಾರಿಸ್ ಅವರ ಪುತ್ರ ಮೊಹಮದ್ ನಲಪಾಡ್ ಬ್ರಿಟನ್‌ಗೆ ತೆರಳಲು ಅನುಮತಿ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

‘ಈ ಸಂಬಂಧ ನನ್ನ ಜಾಮೀನು ಷರತ್ತುಗಳನ್ನು ಸಡಿಲಿಸಿ’ ಎಂದು ನಲಪಾಡ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಪರ ವಕೀಲ ಎಂ.ಎಸ್. ಶ್ಯಾಮಸುಂದರ್, ‘ಈ ವಿಷಯವನ್ನು ತನಿಖಾಧಿಕಾರಿಗೆ ತಿಳಿಸಬೇಕಿರುವ ಕಾರಣ ಸಮಯಾವಕಾಶದ ಅವಶ್ಯಕತೆ ಇದೆ’ ಎಂದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ವಿಚಾರಣೆಯನ್ನು ಇದೇ 27ಕ್ಕೆ ಮುಂದೂಡಿದೆ.

ADVERTISEMENT

ಏನು ಮನವಿ?:
‘ನನ್ನ ತಮ್ಮ ಲಂಡನ್‌ನಲ್ಲಿ ಇದ್ದಾನೆ‌. ಆತನನ್ನು ಭೇಟಿ ಮಾಡಲು ಇದೇ 25ರಿಂದ 15 ದಿನಗಳ ಕಾಲ ಬ್ರಿಟನ್‌ಗೆ ತೆರಳಲು ಉದ್ದೇಶಿಸಿದ್ದೇನೆ. ಆದ್ದರಿಂದ ಜಾಮೀನು ಷರತ್ತು ಸಡಿಲಿಸಿ ಪ್ರವಾಸಕ್ಕೆ ಅವಕಾಶ ಕಲ್ಪಿಸಬೇಕು’ ಎಂದು ನಲಪಾಡ್ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

2018ರ ಫೆಬ್ರುವರಿ 17ರಂದು ರಾತ್ರಿ ಮೊಹಮದ್ ನಲಪಾಡ್ ಮತ್ತು ಅವರ ಸಹಚರರು ನಗರದ ಫರ್ಜಿ ಕೆಫೆಯಲ್ಲಿ ವಿದ್ವತ್ ಮೇಲೆ ತೀವ್ರ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿದ್ದಾರೆ. ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ನಲಪಾಡ್‌ 116 ದಿನಗಳನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಳೆದಿದ್ದರು. ಇವರಿಗೆ ಹೈಕೋರ್ಟ್‌ ಜೂನ್ 14ರಂದು ಷರತ್ತುಬದ್ಧ ಜಾಮೀನು ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.