ADVERTISEMENT

ಪ್ರಕೃತಿ ಚಿಕಿತ್ಸೆ: ಶನಿವಾರದಿಂದ ವಿಚಾರಸಂಕಿರಣ

​ಪ್ರಜಾವಾಣಿ ವಾರ್ತೆ
Published 6 ಜುಲೈ 2018, 19:22 IST
Last Updated 6 ಜುಲೈ 2018, 19:22 IST

ಬೆಂಗಳೂರು: ‘ಪ್ರಕೃತಿ ಚಿಕಿತ್ಸೆ ಮತ್ತು ಯೋಗ; ಇತ್ತೀಚಿನ ಪ್ರವೃತ್ತಿಗಳು’ ಕುರಿತು ಜಿಂದಾಲ್‌ ನೇಚರ್‌ಕ್ಯೂರ್‌ ಇನ್‌ಸ್ಟಿಟ್ಯೂಟ್‌ ಆಯೋಜಿಸಿರುವ ಎರಡು ದಿನದ ವಿಚಾರ ಸಂಕಿರಣಕ್ಕೆ ಶನಿವಾರ ಚಾಲನೆ ದೊರೆಯಲಿದೆ.

ಜಿಂದಾಲ್‌ ನಗರದ ಜೈಮಾಲ್‌ ಹಾಲ್‌ನಲ್ಲಿ ಬೆಳಿಗ್ಗೆ 9.30ಕ್ಕೆ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ರಾಜೀವ್‌ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕುಲಪತಿ ಎಸ್‌.ಸಚ್ಚಿದಾನಂದ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ನಗರಾಭಿವೃದ್ಧಿ ಸಚಿವ ಯು.ಟಿ ಖಾದರ್‌ ಅಧ್ಯಕ್ಷತೆ ವಹಿಸಲಿದ್ದಾರೆ.

ಎರಡು ದಿನಗಳ ಕಾಲ ವಿವಿಧ ವಿಷಯಗಳ ಕುರಿತು ತಜ್ಞರು ಮಾತನಾಡಲಿದ್ದಾರೆ. ಹೃದಯಕ್ಕೆ ಸಂಬಂಧಿಸಿದ ರೋಗಗಳನ್ನು ತಡೆಗಟ್ಟುವಲ್ಲಿ ಯೋಗ ಹೇಗೆ ಸಹಕಾರಿಯಾಗಬಲ್ಲದು ಎಂಬುದರ ಕುರಿತು ಮಾಹಿತಿ ನೀಡಲಾಗುತ್ತದೆ.

ADVERTISEMENT

ಉಸಿರಾಟದ ತೊಂದರೆ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳಿಗೆ ಪರಿಹಾರಗಳನ್ನು ಹುಡುಕುವ ಕುರಿತು ವಿಚಾರ ಸಂಕಿರಣ ನಡೆಯಲಿದೆ. ಸಂಶೋಧನಾ ವಿದ್ಯಾರ್ಥಿಗಳು ತಮ್ಮ ಅಧ್ಯಯನಗಳ ಕುರಿತು ಮಾಹಿತಿ ನೀಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.