ADVERTISEMENT

ಮೆಟ್ರೊ ಪ್ರಯಾಣಿಕರ ಸಂಖ್ಯೆ 3.8 ಲಕ್ಷಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 3 ಜುಲೈ 2018, 20:33 IST
Last Updated 3 ಜುಲೈ 2018, 20:33 IST
ಮೆಟ್ರೋ
ಮೆಟ್ರೋ   

ಬೆಂಗಳೂರು: ಹೆಚ್ಚುವರಿ ಬೋಗಿಗಳ ಜೋಡಣೆ ಬಳಿಕ ಮೆಟ್ರೊ ರೈಲಿನಲ್ಲಿ ಪ್ರಯಾಣಿಸುವವರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ.

3.4 ಲಕ್ಷ ಇದ್ದ ನಿತ್ಯದ ಪ್ರಯಾಣಿಕರ ಸಂಖ್ಯೆ 3.8 ಲಕ್ಷಕ್ಕೆ ಏರಿದೆ. ಸೋಮವಾರ ಪ್ರಯಾಣಿಕರ ಸಂಖ್ಯೆ ಮತ್ತಷ್ಟು ಹೆಚ್ಚಿದ್ದ ಕಾರಣ ₹ 1.30 ಕೋಟಿ ವರಮಾನ ಸಿಕ್ಕಿದೆ.

ಕಳೆದ ಒಂದು ವರ್ಷದಲ್ಲಿ ಮೆಟ್ರೊ ಸಂಸ್ಥೆಗೆ ಶುಲ್ಕದಿಂದ ಬಂದ ವರಮಾನ ₹85 ಲಕ್ಷ. ಹೋದ ವರ್ಷ ಸೆಪ್ಟೆಂಬರ್‌ನಲ್ಲಿ 4.1 ಲಕ್ಷಕ್ಕಿಂತ ಹೆಚ್ಚು ಜನರು ಪ್ರಯಾಣ ಮಾಡಿದ್ದರು. ವಾರಾಂತ್ಯ ಹಾಗೂ ಸರಣಿ ರಜೆಯ ಸಂದರ್ಭಗಳಲ್ಲಿ ಮಾತ್ರ ಪ್ರಯಾಣಿಕರ ಸಂಖ್ಯೆ ಇಳಿಮುಖವಾಗುತ್ತದೆ.

ADVERTISEMENT

‘ಆರು ಬೋಗಿಗಳ ಜೋಡಣೆ ಬಳಿಕ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಮುಂದಿನ ದಿನಗಳಲ್ಲೂ ಪ್ರಯಾಣಿಕರ ಸಂಖ್ಯೆ ಹೆಚ್ಚುವ ನಿರೀಕ್ಷೆ ಇದೆ’ ಎಂದು ನಿಗಮದ ಅಧಿಕಾರಿಯೊಬ್ಬರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.