ADVERTISEMENT

‘ಬಡ್ತಿ ಮೀಸಲಾತಿ: ಪ್ರಕ್ರಿಯೆ ಆರಂಭಿಸಿ’

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2018, 19:41 IST
Last Updated 27 ಸೆಪ್ಟೆಂಬರ್ 2018, 19:41 IST

ಬೆಂಗಳೂರು: ‘ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರಿಗೆ ಬಡ್ತಿ ಮೀಸಲಾತಿ ಮುಂದುವರಿಸಬೇಕು’ ಎಂದು ರಾಜ್ಯ ಸರ್ಕಾರಿ ಎಸ್‌.ಸಿ. ಎಸ್‌.ಟಿ. ನೌಕರರ ಒಕ್ಕೂಟ ಒತ್ತಾಯಿಸಿದೆ.

ಒಕ್ಕೂಟದ ಅಧ್ಯಕ್ಷ ಕೆ.ದಾಸ್‌ಪ್ರಕಾಶ್‌ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ,‘ಆಯಾ ರಾಜ್ಯ ಸರ್ಕಾರಗಳು ಬಡ್ತಿ ಮೀಸಲಾತಿ ನೀಡುವ ಸಂವಿಧಾನಿಕ ಅಧಿಕಾರ ಇದೆ ಎಂದು ಕೋರ್ಟ್‌ ತೀರ್ಪಿನಲ್ಲಿ ತಿಳಿಸಿದೆ’ ಎಂದು ಸಲಹೆ ನೀಡಿದರು.

ದಲಿತ ಒಕ್ಕೂಟದಿಂದಲೂ ಒತ್ತಾಯ: ‘ರಾಜ್ಯ ಸರ್ಕಾರ ಈ ಹಿಂದೆ ನೀಡಿದ್ದ ‘ಹಿಂಬಡ್ತಿ ಮತ್ತು ಸೇವಾ ಹಿರಿತನ ರದ್ಧತಿ’ ಆದೇಶವನ್ನು ಹಿಂದಕ್ಕೆ ಪಡೆಯಬೇಕು ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಂ.ವೆಂಕಟಸ್ವಾಮಿ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.