ADVERTISEMENT

‘ಅಂಗವಿಕಲರಿಗೆ ಸ್ವಾವಲಂಬಿ ಜೀವನಕ್ಕೆ ಪ್ರೋತ್ಸಾಹಿಸಿ’

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2017, 8:08 IST
Last Updated 5 ಡಿಸೆಂಬರ್ 2017, 8:08 IST

ಬೀದರ್: ‘ಸ್ವಾವಲಂಬಿ ಜೀವನ ನಡೆಸಲು ಅಂಗವಿಕಲರನ್ನು ಪ್ರೋತ್ಸಾಹಿಸಬೇಕು’ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಎಂ.ಎಸ್‌. ಪಾಟೀಲ ತಿಳಿಸಿದರು.

ವಿಶ್ವ ಅಂಗವಿಕಲರ ದಿನಾಚರಣೆ ಪ್ರಯುಕ್ತ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘದ ಆಶ್ರಯದಲ್ಲಿ ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ಅಂಗವಿಕಲರಲ್ಲಿನ ಪ್ರತಿಭೆಯನ್ನು ಗುರುತಿಸಿ ಉತ್ತೇಜನ ನೀಡಬೇಕು’ ಎಂದು ಹೇಳಿದರು.

‘ಅಂಗವಿಕಲರನ್ನು ಗೌರವದಿಂದ ಕಾಣಬೇಕು. ವಿವಿಧ ಇಲಾಖೆಗಳಲ್ಲಿ ಅಂಗವಿಕಲರಿಗಾಗಿ ಇರುವ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ತಲುಪಿಸಬೇಕು’ ಎಂದರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆ.ಎಚ್. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಜಿ. ನಂಜುಂಡಯ್ಯ,

ADVERTISEMENT

ನ್ಯಾಯಾಧೀಶರಾದ ನಿರ್ಮಲಾದೇವಿ. ಎಸ್., ಯಮುನಪ್ಪ, ಆರ್. ರಾಘವೇಂದ್ರ, ಉಜ್ವಲಾ ವೀರಣ್ಣ, ಶ್ರೇಯಸ್ ದೊಡ್ಡಮನಿ, ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಸಂಜೀವರೆಡ್ಡಿ ರೇಕುಳಗಿ, ಪ್ರಧಾನ ಕಾರ್ಯದರ್ಶಿ ನಾಗೇಂದ್ರ ಬಿರಾದಾರ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.