ADVERTISEMENT

ಅಕ್ಕಮಹಾದೇವಿ ಜಯಂತಿ ಆಚರಣೆ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2017, 9:32 IST
Last Updated 15 ಏಪ್ರಿಲ್ 2017, 9:32 IST

ಬೀದರ್: ಕನ್ನಡ ಸಾಹಿತ್ಯದ ಮೊದಲ ಕವಯತ್ರಿ ಅಕ್ಕಮಹಾದೇವಿ ಎಂದು ಭಾಲ್ಕಿ ಹಿರೇಮಠ ಸಂಸ್ಥಾನ ಮಠದ ಬಸವಲಿಂಗ ಪಟ್ಟದ್ದೇವರು ತಿಳಿಸಿದರು. ವಿದ್ಯಾನಗರದ ಚನ್ನಬಸವ ಪಟ್ಟದ್ದೇವರ ಪ್ರಸಾದ ನಿಲಯದಲ್ಲಿ ಈಚೆಗೆ ನಡೆದ ಅಕ್ಕಮಹಾದೇವಿ ಜಯಂತಿ ಹಾಗೂ ಅನುಭವ ಮಂಟಪ ತಿಂಗಳ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಅಕ್ಕಮಹಾದೇವಿ 434 ವಚನಗಳನ್ನು  ಬರೆದು ಕನ್ನಡ ಸಾಹಿತ್ಯಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಈ ಮೂಲಕ ಮಹಿಳೆಯರ ಗೌರವ ಹೆಚ್ಚಿಸಿದ್ದಾರೆ ಎಂದು ಹೇಳಿದರು.
ನಿವೃತ್ತ  ವೈದ್ಯಾಧಿಕಾರಿ ಡಾ. ವೈಜನಾಥ ಬಿರಾದಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಚನ್ನಬಸವ ಪಟ್ಟದ್ದೇವರು ಬಸವತತ್ವ ಪ್ರಚಾರದ ಜೊತೆಗೆ ಸಮಾಜದಲ್ಲಿನ ದೀನ ದಲಿತರ ಹಾಗೂ ಬಡವರ ಸೇವೆ ಮಾಡಿದ್ದರು. ಜ್ಞಾನ ದಾಸೋಹ ಮಾಡಲು ಶಾಲಾ ಕಾಲೇಜುಗಳನ್ನು ಸ್ಥಾಪಿಸಿದ್ದರು ಎಂದು ತಿಳಿಸಿದರು.

ಎಂಜಿನಿಯರ್‌ ಪಿ. ಸಂಗಪ್ಪ ಅಧ್ಯಕ್ಷತೆ ವಹಿಸಿದ್ದರು. ಲೇಖಕಿ ಮಾಲಾಶ್ರೀ ವೈಜನಾಥ ಹೊಸಳ್ಳಿ ರಚಿಸಿರುವ ‘ನಿಲುವು’ ಕವನ ಸಂಕಲನ ಬಿಡುಗಡೆ ಮಾಡಲಾಯಿತು. ಹಿರಿಯ ಸಾಹಿತಿ ಎಂ.ಜಿ. ದೇಶಪಾಂಡೆ  ಮಾತನಾಡಿದರು.

ADVERTISEMENT

ಮುಖ್ಯಮಂತ್ರಿ ಪದಕ ಪುರಸ್ಕೃತರಾದ ಸಿಪಿಐ ಶರಣಬಸವೇಶ್ವರ ಭಜಂತ್ರಿ  ಹಾಗೂ ಸಿಪಿಐ ಅಲಿಸಾಬ್‌ ಬಾಗವಾನ್‌ ಅವರನ್ನು ಸನ್ಮಾನಿಸಲಾಯಿತು. ಭಾರತೀಯ ಬಸವ ಬಳಗದ ಅಧ್ಯಕ್ಷ ಬಾಬುವಾಲಿ, ಡಾ. ಸಂತೋಷ ಅಣ್ಣೆಪ್ಪನೋರ ಉಪಸ್ಥಿತರಿದ್ದರು.

ಪ್ರೊ. ಉಮಾಕಾಂತ ಮೀಸೆ ನಿರೂಪಿಸಿದರು. ಶ್ರೀಕಾಂತ ಬಿರಾದಾರ ವಂದಿಸಿದರು. ಭಾಲ್ಕಿಯ ಗುರುಚನ್ನ ಬಸವ ಸಾಂಸ್ಕೃತಿಕ ಕಲಾ ಮತ್ತು ಕ್ರೀಡಾ ವೇದಿಕೆ ಟ್ರಸ್ಟ್‌ನ ಕಲಾವಿದರು ಅಕ್ಕಮಹಾದೇವಿ ನಾಟಕ ಪ್ರದರ್ಶಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.