ADVERTISEMENT

ಈಶ್ವರ ಖಂಡ್ರೆ ಟೆಂಡರ್‌ ಸಚಿವ ಪ್ರಕಾಶ ಜಾವಡೇಕರ್‌ ಆರೋಪ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2017, 6:30 IST
Last Updated 22 ಸೆಪ್ಟೆಂಬರ್ 2017, 6:30 IST
ಪ್ರಕಾಶ ಜಾವಡೇಕರ್‌
ಪ್ರಕಾಶ ಜಾವಡೇಕರ್‌   

ಬೀದರ್: ‘ಅಭಿವೃದ್ಧಿ ಕಾಮಗಾರಿಗಳಿಗೆ ಟೆಂಡರ್‌ ಕರೆದರೂ ಬೀದರ್‌ ಜಿಲ್ಲಾ ಉಸ್ತುವಾರಿ ಸಚಿವರು ಆನ್‌ಲೈನ್‌ನಲ್ಲಿ ತಮ್ಮ ಆಪ್ತರ ಅರ್ಜಿಗಳನ್ನು ಮಾತ್ರ ಅಪ್‌ಲೋಡ್ ಮಾಡಿಸಿ, ನಂತರ ವೆಬ್‌ಸೈಟ್‌ ಅನ್ನು ಬ್ಲಾಕ್‌ ಮಾಡಿಸುತ್ತಿದ್ದಾರೆ’ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ ಜಾವಡೇಕರ್‌ ಆರೋಪಿಸಿದರು.

ಹುಮನಾಬಾದ್ ತಾಲ್ಲೂಕಿನ ಮಾಣಿಕನಗರದಲ್ಲಿ ಗುರುವಾರ ಬಿಜೆಪಿ ಜಿಲ್ಲಾ ಘಟಕದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ‘ಆಪ್ತರಲ್ಲದ ಗುತ್ತಿಗೆದಾರರ ಅರ್ಜಿಗಳು ಆನ್‌ಲೈನ್‌ನಲ್ಲಿ ಅಪ್‌ಲೋಡ್‌ ಆಗದಂತೆ ನೋಡಿಕೊಳ್ಳುತ್ತಿದ್ದಾರೆ. ಅವರು ಜಿಲ್ಲಾ ಉಸ್ತುವಾರಿ ಸಚಿವರಲ್ಲ, ಟೆಂಡರ್‌ ಸಚಿವರು’ ಎಂದು ಈಶ್ವರ ಖಂಡ್ರೆ ವಿರುದ್ಧ ಹರಿಹಾಯ್ದರು.

‘ಕಾಂಗ್ರೆಸ್‌ ಹಿಂದುಳಿದ ವರ್ಗದವರ ವಿರೋಧಿ ಆಗಿದೆ. ರಾಜ್ಯಸಭೆಯಲ್ಲಿ ಅಲ್ಪಸಂಖ್ಯಾತರ ಆಯೋಗ ರಚನೆ ಮಸೂದೆಗೆ ಒಪ್ಪಿಗೆ ನೀಡುತ್ತಿಲ್ಲ. ಆಯೋಗಕ್ಕೆ ಸಾಂವಿಧಾನಿಕ ಮಾನ್ಯತೆ ಒದಗಿಸಿಕೊಡಲು ಸಹಕರಿಸುತ್ತಿಲ್ಲ’ ಎಂದು ದೂರಿದರು.

ADVERTISEMENT

‘ದೇಶದ 19 ರಾಜ್ಯಗಳಲ್ಲಿ ಬಿಜೆಪಿಯ ಅಧಿಕಾರ ಇದೆ. 2018ರಲ್ಲಿ ಕರ್ನಾಟಕದಲ್ಲೂ ಬಿಜೆಪಿಯನ್ನು ಅಧಿಕಾರಕ್ಕೆ ತರುವುದು ನಮ್ಮ ಮುಂದಿನ ಗುರಿಯಾಗಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.