ADVERTISEMENT

ಉಚಿತ ಬಸ್‌ ಪಾಸ್‌ಗೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 13 ಜುಲೈ 2017, 6:26 IST
Last Updated 13 ಜುಲೈ 2017, 6:26 IST

ಹುಮನಾಬಾದ್: ಸರ್ಕಾರ ರಾಜ್ಯದ ಎಲ್ಲ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಒದಗಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ತಾಲ್ಲೂಕು ಘಟಕ ಪದಾಧಿಕಾರಿಗಳು ಬುಧವಾರ ತಹಶೀಲ್ದಾರ್‌ ಡಿ.ಎಂ.ಪಾಣಿ ಅವರಿಗೆ ಮನವಿ ಸಲ್ಲಿಸಿದರು.

ಪರಿಶಿಷ್ಟ ಜಾತಿ,ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ವಿತರಿಸಲು ನಿರ್ಧರಿಸಿರುವುದು ಸ್ವಾಗತರ್ಹ. ಹಾಗೆಯೇ ರಾಜ್ಯದ ಅಸಂಖ್ಯಾತ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೂ ಉಚಿತ ಬಸ್‌ ಪಾಸ್‌ ಸೌಲಭ್ಯ ಕಲ್ಪಿಸಬೇಕು. ಬಸ್‌ ಪಾಸ್‌ ಹೊಂದಿರುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ನಗರ ಸಾರಿಗೆ ಬಸ್‌ನಲ್ಲಿ ಸಂಚರಿಸಲು ಅವಕಾಶ ನೀಡಬೇಕು.ಮಾಡಬೇಕು. ಬಸ್‌ ಸೌಲಭ್ಯ ವಂಚಿತ ಗ್ರಾಮಗಳನ್ನು ಗುರುತಿಸಿ, ಬಸ್‌ ಸಂಚಾರ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ತಾಲ್ಲೂಕು ಘಟಕದ ಅಧ್ಯಕ್ಷ ಶಿವಶಂಕರ ಸ್ವಾಮಿ, ತಾಲ್ಲೂಕು ಸಂಚಾಲಕ ಮಹಾದೇವ ಗವಾರೆ, ಪ್ರಧಾನ ಕಾರ್ಯದರ್ಶಿ ಪ್ರಶಾಂತ ಪಾಟೀಲ ಪ್ರಮುಖರಾದ ಅಜಯ್‌ಸ್ವಾಮಿ, ಅರುಣ ಪಾಟೀಲ, ಕೃಷ್ಣಾ ಪಂಚಾಳ, ಮಹೇಶಬಾಬು ಗೋರ್ಟೆ ಭಾಗವಹಿಸಿದ್ದರು.

ADVERTISEMENT

ಹುಮನಾಬಾದ್‌ ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜು, ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

***

‘ಬಡ  ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್ ನೀಡಿ’

ಔರಾದ್:  ಪರಿಶಿಷ್ಟ ಜಾತಿ ಪಂಗಡ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ನೀಡಲು ಉದ್ದೇಶಿಸಿರುವ ಉಚಿತ ಬಸ್ ಪಾಸ್ ಸೌಲಭ್ಯವನ್ನು ಇತರೆ ವರ್ಗದ ಬಡ ವಿದ್ಯಾರ್ಥಿಗಳಿಗೂ ನೀಡಬೇಕು ಎಂದು ಎಬಿವಿಪಿ ಆಗ್ರಹಿಸಿದೆ.

ಎಬಿವಿಪಿ ಜಿಲ್ಲಾ ಸಂಚಾಲಕ ಅಶೋಕ ಶೆಂಬೆಳ್ಳಿ, ಹಾವಪ್ಪ ದ್ಯಾಡೆ, ಅನೀಲ ಮೇತ್ರೆ ಅವರ ನೇತೃತ್ವದಲ್ಲಿ ಬುಧವಾರ ಇಲ್ಲಿನ ಕನ್ನಡಾಂಬೆ ವೃತ್ತದ ಬಳಿ ರಸ್ತೆ ತಡೆ ನಡೆಸಿದರು.

ರಾಜ್ಯ ಸರ್ಕಾರ ವಿದ್ಯಾರ್ಥಿಗಳಲ್ಲೂ ತಾರತಮ್ಯ ನೀತಿ ಅನುಸರಿಸುತ್ತಿದೆ. ಎಲ್ಲ ಸಮುದಾಯದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಿದರೆ ಬಡ ವರ್ಗದ ಇತರೆ ಪಾಲಕರಿಗೂ ಒಂದಿಷ್ಟು ಅನುಕೂಲವಾಗಲಿದೆ. ಈ ಕುರಿತು ಸರ್ಕಾರ ತಕ್ಷಣ ತೀರ್ಮಾನ ಕೈಗೊಳ್ಳುವಂತೆ ಆಗ್ರಹಿಸಿದರು. ಸ್ಥಳಕ್ಕೆ ಬಂದ ತಹಶೀಲ್ದಾರ್ ಎಂ. ಚಂದ್ರಶೇಖರ ಅವರಿಗೆ ಮನವಿಪತ್ರ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.