ADVERTISEMENT

ಎಂ.ಬಿ.ಪಾಟೀಲ ವಿರುದ್ಧ ಕ್ರಮಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2017, 6:06 IST
Last Updated 20 ಡಿಸೆಂಬರ್ 2017, 6:06 IST
ಬಸವನಬಾಗೇವಾಡಿಯ ಶಿವಪ್ರಕಾಶ ಶಿವಾಚಾರ್ಯರಿಗೆ ಅವಹೇಳನಕಾರಿಯಾಗಿ ಮಾತನಾಡಿ, ಬೆದರಿಕೆಯೊಡ್ಡಿದ ಸಚಿವ ಎಂ.ಬಿ.ಪಾಟೀಲ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ವೀರಶೈವ ಲಿಂಗಾಯತ ವೇದಿಕೆ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು
ಬಸವನಬಾಗೇವಾಡಿಯ ಶಿವಪ್ರಕಾಶ ಶಿವಾಚಾರ್ಯರಿಗೆ ಅವಹೇಳನಕಾರಿಯಾಗಿ ಮಾತನಾಡಿ, ಬೆದರಿಕೆಯೊಡ್ಡಿದ ಸಚಿವ ಎಂ.ಬಿ.ಪಾಟೀಲ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ವೀರಶೈವ ಲಿಂಗಾಯತ ವೇದಿಕೆ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು   

ವಿಜಯಪುರ: ಬಸವನ ಬಾಗೇವಾಡಿಯ ಶಿವಪ್ರಕಾಶ ಸ್ವಾಮೀಜಿಗಳ ಬಗ್ಗೆ ಅವ ಹೇಳನಕಾರಿಯಾಗಿ ಮಾತನಾಡಿ, ಬೆದರಿಕೆಯೊಡ್ಡಿದ ಸಚಿವ ಎಂ.ಬಿ.ಪಾಟೀಲ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ವೀರಶೈವ ಲಿಂಗಾಯತ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನಾ ಸಭೆ ನಡೆಸಲಾಯಿತು.

ನಗರದ ಸಿದ್ಧೇಶ್ವರ ದೇವಾಲಯದ ಮುಂಭಾಗದಲ್ಲಿ ಮಂಗಳವಾರ ಮುಸ್ಸಂಜೆ ನಡೆದ ಬೃಹತ್ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡಿದ್ದ ಕಾಶಿಯ ಡಾ.ಚಂದ್ರಶೇಖರ ಶಿವಾಚಾರ್ಯರು, ಉಜ್ಜಯಿನಿಯ ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯರು, ಶ್ರೀಶೈಲದ ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯರು, ವಿವಿಧೆಡೆಯಿಂದ ಆಗಮಿಸಿದ್ದ 200ಕ್ಕೂ ಹೆಚ್ಚು ಮಠಾಧೀಶರು ಸಚಿವ ಎಂ.ಬಿ.ಪಾಟೀಲರ ಕ್ರಮವನ್ನು ಖಂಡಿಸಿದರು.

‘ಜನಪ್ರತಿನಿಧಿಗಳಾದವರು ಈ ರೀತಿಯಾಗಿ ವರ್ತನೆ ಮಾಡಿ, ಧರ್ಮ ಗುರುಗಳ ಬಗ್ಗೆಯೇ ಅವ ಹೇಳನಕಾರಿಯಾಗಿ ಮಾತನಾಡಿ ರುವುದು ಎಷ್ಟು ಸರಿ ? ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿ ಸ್ವಾಮೀಜಿಗಳನ್ನೇ ನೋಡಿಕೊಳ್ಳುತ್ತೇನೆ ಎನ್ನುವುದು ಎಷ್ಟು ಸರಿ ? ಇದು ಸಚಿವರ ಸಂಸ್ಕೃತಿಯನ್ನು ಎತ್ತಿ ತೋರಿಸುತ್ತಿದೆ’ ಎಂದು ಟೀಕಿಸಿದರು.

ADVERTISEMENT

‘ಶಿವಾಚಾರ್ಯರ ಕುರಿತು ಅವಹೇಳನಕಾರಿಯಾಗಿ ಮಾತನಾಡಿ ರುವ ಸಚಿವ ಎಂ.ಬಿ.ಪಾಟೀಲ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದು, ಕೂಡಲೇ ಅವರನ್ನು ಸಚಿವ ಸ್ಥಾನದಿಂದ ಅಮಾನತು ಮಾಡಬೇಕು, ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಸಚಿವ ಎಂ.ಬಿ.ಪಾಟೀಲ ಅವರನ್ನು ಕೂಡಲೇ ಶಾಸಕ ಸ್ಥಾನದಿಂದ ಅಮಾನತುಗೊಳಿಸುವುದು.

ರಾಜ್ಯದಲ್ಲಿ ಯಾವುದೇ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಯಾವುದೇ ಒಂದು ಕೋಮಿನ ವಿರುದ್ಧ ಮಾತನಾಡುವುದು ನಿಷೇಧಿಸುವ ನಿಟ್ಟಿನಲ್ಲಿ ವಿಶೇಷ ಕಾಯ್ದೆ ರೂಪಿಸಬೇಕು. ಇಲ್ಲಿಯವರೆಗೆ ಧಾರ್ಮಿಕ ವಿರೋಧಿ ಹೇಳಿಕೆ ನೀಡಿ ವಿವಿಧ ಕೋಮುಗಳ ಜನರ ಭಾವನೆಗಳನ್ನು ಕೆರಳಿಸಿರುವ ಜನಪ್ರತಿನಿಧಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ತನಿಖೆ ನಡೆಸುವುದು’ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಹಕ್ಕೊತ್ತಾಯ ಮಂಡಿಸಿದರು.

ಕಾಶಿ ಪೀಠದ ಡಾ.ಚಂದ್ರಶೇಖರ ಶಿವಾಚಾರ್ಯರು ಮಾತನಾಡಿದರು. ಬಬಲೇಶ್ವರ ಬೃಹನ್ಮಠದ ಡಾ.ಮಹಾದೇವ ಶಿವಾಚಾರ್ಯರು ಸೇರಿದಂತೆ ವಿವಿಧ ಭಾಗಗಳಿಂದ ಆಗಮಿಸಿದ ಮಠಾಧೀಶರು ಪ್ರತಿಭಟನಾ ಜಾಥಾ, ಸಭೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.