ADVERTISEMENT

ಕಾರಂಜಾದಿಂದ ಮೂರು ತಾಲ್ಲೂಕುಗಳಿಗೆ ಕುಡಿಯುವ ನೀರು: ಎಂ.ಬಿ.ಪಾಟೀಲ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2017, 6:21 IST
Last Updated 18 ನವೆಂಬರ್ 2017, 6:21 IST

ಬೀದರ್‌: ‘ಕಾರಂಜಾ ಜಲಾಶಯದಿಂದ ಬೀದರ್‌ ಜಿಲ್ಲೆಯ ಮೂರು ತಾಲ್ಲೂಕುಗಳಿಗೆ ಕುಡಿಯುವ ನೀರು ಪೂರೈಸಲಾಗುತ್ತಿದೆ’ ಎಂದು ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ. ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ ಅವರ ಪ್ರಶ್ನೆಗೆ ನೀಡಿರುವ ಲಿಖಿತ ಉತ್ತರದಲ್ಲಿ ಈ ಮಾಹಿತಿ ನೀಡಿದ್ದಾರೆ.

‘ಕಾರಂಜಾ ನೀರಾವರಿ ಯೋಜನೆಯಡಿ ಭಾಲ್ಕಿ, ಬೀದರ್ ಹಾಗೂ ಹುಮನಾಬಾದ್ ತಾಲ್ಲೂಕುಗಳ ಒಟ್ಟು 29,227 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸಲು ಉದ್ದೇಶಿಸಲಾಗಿದೆ. ಕುಡಿಯುವ ಉದ್ದೇಶಕ್ಕಾಗಿ ಜಲಾಶಯದಿಂದ 0.9393 ಟಿ.ಎಂ.ಸಿ. ನೀರು ಹಂಚಿಕೆ ಮಾಡಲಾಗಿದೆ’ ಎಂದು ಹೇಳಿದ್ದಾರೆ.

‘ಕಾರಂಜಾ ಜಲಾಶಯದಿಂದ ಬೀದರ್‌ ನಗರ ಹಾಗೂ ತಾಲ್ಲೂಕಿನ 54 ಗ್ರಾಮ, ಹುಮನಾಬಾದ್, ಚಿಟಗುಪ್ಪ ಪಟ್ಟಣ ಮತ್ತು ಹುಮನಾಬಾದ್ ತಾಲ್ಲೂಕಿನ 17 ಗ್ರಾಮ ಹಾಗೂ ಭಾಲ್ಕಿ ತಾಲ್ಲೂಕಿನ 24 ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ’ ಎಂದು ತಿಳಿಸಿದ್ದಾರೆ.

ADVERTISEMENT

‘ಕಾರಂಜಾ ಯೋಜನೆಯಿಂದ ಜಿಲ್ಲೆಯ 29,227 ಹೆಕ್ಟೇರ್, ಮೇಲ್ಡಂಡೆ ಮುಲ್ಲಾಮಾರಿ ಯೋಜನೆಯಿಂದ 3,279 ಹೆಕ್ಟೇರ್ ಹಾಗೂ ಚುಳಕಿನಾಲಾ ಯೋಜನೆಯಿಂದ 4,047 ಹೆಕ್ಟೇರ್ ಸೇರಿದಂತೆ ಜಿಲ್ಲೆಯ ಒಟ್ಟು 36,553 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ದೊರೆಯಲಿದೆ’ ಎಂದು ಹೇಳಿದ್ದಾರೆ. ‘ಕಾರಂಜಾ ಯೋಜನೆಯ ಬಾಕಿ ಇರುವ ಎಲ್ಲ ಕಾಲುವೆಗಳ ಕಾಮಗಾರಿ 2018ರ ಮಾರ್ಚ್‌ವರೆಗೆ ಪೂರ್ಣಗೊಳಿಸಲಾಗುವುದು’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.