ADVERTISEMENT

‘ಗುಡಿಸಲು ಮುಕ್ತ ತಾಲ್ಲೂಕಿಗಾಗಿ ಕ್ರಮ’

​ಪ್ರಜಾವಾಣಿ ವಾರ್ತೆ
Published 12 ಜುಲೈ 2017, 5:55 IST
Last Updated 12 ಜುಲೈ 2017, 5:55 IST

ಭಾಲ್ಕಿ: ಮುಂಬರುವ ದಿನಗಳಲ್ಲಿ ನಾಲ್ಕು ಸಾವಿರ ಹೆಚ್ಚುವರಿ ಮನೆಗಳನ್ನು ಮಂಜೂರು ಮಾಡಿಸಿ ಕ್ಷೇತ್ರವನ್ನು ಸಂಪೂರ್ಣ ಗುಡಿಸಲು ಮುಕ್ತ ತಾಲ್ಲೂಕು ಆಗಿ ಮಾಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ನುಡಿದರು.

ಪಟ್ಟಣದಲ್ಲಿ ಸೋಮವಾರ ತಾಲ್ಲೂಕಿನ ಕಾಕನಾಳ ಗ್ರಾಮಸ್ಥರಿಗೆ ವಿವಿಧ ಯೋಜನೆಯಡಿ ಮಂಜೂರಾದ ಮನೆಗಳ ಹಕ್ಕುಪತ್ರ ವಿತರಿಸಿ ಮಾತನಾಡಿದರು. ಪ್ರತಿಯೊಂದು ಬಡ ಕುಟುಂಬಕ್ಕೆ ವಾಸ ಮಾಡಲು ಯೋಗ್ಯವಾದ ಒಂದು ಸೂರು ಇರಬೇಕು.

ಈ ದಿಸೆಯಲ್ಲಿ ಇಲ್ಲಿಯವರೆಗೆ ಬಸವ, ಅಂಬೇಡ್ಕರ, ಇಂದಿರಾ ಆವಾಸ್, ನಗರ ವಾಜಪೇಯಿ ಮತ್ತು ವಿಶೇಷ ಅಭಿವೃದ್ಧಿ ಯೋಜನೆ ಸೇರಿದಂತೆ ನಾನಾ ವಸತಿ ಯೋಜನೆಗಳಡಿಯಲ್ಲಿ ಸುಮಾರು 23 ಸಾವಿರ ಮನೆಗಳ ಹಕ್ಕು ಪತ್ರಗಳನ್ನು ಅರ್ಹ ಫಲಾನುಭವಿಗಳಿಗೆ ನೀಡಲಾಗಿದೆ ಎಂದು ತಿಳಿಸಿದರು.

ADVERTISEMENT

ನಾನಾ ವಸತಿ ಯೋಜನೆಗಳಲ್ಲಿ ಆಯ್ಕೆಯಾದ 18 ಸಾವಿರ ಜನ ಫಲಾನುಭವಿಗಳು ಈಗಾಗಲೇ ಮನೆ ನಿರ್ಮಾಣ ಮಾಡಿಕೊಂಡಿದ್ದು, ಉಳಿದ ಮನೆಗಳ ನಿರ್ಮಾಣ ಕಾಮಗಾರಿ ಸಹ ಪ್ರಗತಿಯಲ್ಲಿದೆ ಎಂದು ವಿವರಿಸಿದರು. ಪುರಸಭೆ ಅಧ್ಯಕ್ಷ ವಿಶಾಲ ಪೂರಿ, ಕಾಂಗ್ರೆಸ್‌ ತಾಲ್ಲೂಕು ಘಟಕದ ಅಧ್ಯಕ್ಷ ಹಣಮಂತರಾವ ಚವ್ಹಾಣ, ಜಮೀಲ್ ಅಹ್ಮದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.