ADVERTISEMENT

ಧೈರ್ಯದಿಂದ ಪರೀಕ್ಷೆ ಎದುರಿಸಲು ಸಲಹೆ

ಎಕಲಾರ ಪ್ರೌಢಶಾಲೆಯಲ್ಲಿ ಪರೀಕ್ಷೆ ಸಿದ್ಧತಾ ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2017, 7:14 IST
Last Updated 23 ಮಾರ್ಚ್ 2017, 7:14 IST

ಔರಾದ್:  ಮಾರ್ಚ್‌ 30ರಿಂದ ಆರಂಭ ವಾಗಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕೆಲ ಬದಲಾವಣೆ ಆಗಿದ್ದು,  ವಿದ್ಯಾರ್ಥಿಗಳು ಈ ಬಗ್ಗೆ ಗಮನ ಹರಿಸಬೇಕು ಎಂದು ಮುಖ್ಯ ಶಿಕ್ಷಕ ಮಹಿಪಾಲರೆಡ್ಡಿ ಹೇಳಿದರು.

ತಾಲ್ಲೂಕಿನ ಎಕಲಾರ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಮತ್ತು ಪರೀಕ್ಷಾ ಸಿದ್ಧತೆ ಮಾಹಿತಿ ಕಾರ್ಯಾಗಾ ರದಲ್ಲಿ ಅವರು ಮಾತ ನಾಡಿದರು.

ಪರೀಕ್ಷೆಗಳು ನಿಗದಿತ ದಿನಾಂಕ ದಂದು ಬೆಳಿಗ್ಗೆ 9.30ಕ್ಕೆ ಆರಂಭ ವಾಗಲಿವೆ. ತಡವಾಗಿ ಬರುವ ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಪರೀಕ್ಷಾ ಕೊಠಡಿಗೆ ಹಾಜರಾಗಲು ಅವಕಾಶವಿರುವುದಿಲ್ಲ. ಈ ಬಾರಿ ಪ್ರಶ್ನೆ ಮತ್ತು ಉತ್ತರ ಪತ್ರಿಕೆಗಳು ಪ್ರತ್ಯೇಕವಾಗಿ ಮುದ್ರಿಸಿ ವಿತರಿಸಲಾಗುತ್ತಿದೆ. ಹೀಗಾಗಿ ಬರೆದ ಉತ್ತರ ತಪ್ಪಾದರೆ ಮತ್ತೆ ಬರೆಯಲು ಅವಕಾಶವಿದೆ ಎಂದು ತಿಳಿಸಿದರು.

ತಾಲ್ಲೂಕಿನಾದ್ಯಂತ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಕುರಿತು ಮಾರ್ಗದರ್ಶನ ನೀಡಲಾಗಿದೆ. ವಿದ್ಯಾರ್ಥಿಗಳು ಉತ್ತಮವಾಗಿ ಪರೀಕ್ಷೆ ಬರೆದು ಒಳ್ಳೆಯ ಫಲಿತಾಂಶ ತರಬೇಕು ಎಂದರು.

ಶಿಕ್ಷಕ ಸಂಜಪ್ಪ ಮಾನುರೆ ಮಾತನಾಡಿ, ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುವ ಜತೆಗೆ ವಿದ್ಯಾರ್ಥಿಗಳು ಆರೋಗ್ಯದ ಬಗ್ಗೆ ಗಮನ ಹರಿಸಬೇಕು. ಯಾವುದೇ ಕಾರಣಕ್ಕೂ ಗಾಬ ರಿಯಾಗಬಾರದು ಎಂದು ಹೇಳಿದರು.

ಕೊಳ್ಳೂರ್‌ ಶಾಲೆ ಮುಖ್ಯ ಶಿಕ್ಷಕ ಕೃಷ್ಣಾರೆಡ್ಡಿ ಮಾತನಾಡಿ, ಸರಿಯಾಗಿ ಸಿದ್ಧತೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ಪರೀಕ್ಷೆ ಕಷ್ಟವಾಗುವುದಿಲ್ಲ ಎಂದು ಹೇಳಿದರು.

ಚಿಂತಕಿ ಶಾಲೆ ಮುಖ್ಯ ಶಿಕ್ಷಕ ಗೋಪಾಲರಾವ ಹೊಸಮನಿ, ಪತ್ರಕರ್ತ ಮನ್ಮಥಪ್ಪ ಸ್ವಾಮಿ, ಶಾಲಾ ಸಮಿತಿ ಅಧ್ಯಕ್ಷ ರಾಜಕುಮಾರ ಪಾಟೀಲ, ಉಪಾಧ್ಯಕ್ಷ ಶಿವರಾಜ ಜೀರ್ಗೆ, ಅನೀಲ ಜಿರೋಬೆ, ಶಿಕ್ಷಕ ಬೀರಪ್ಪ ಕಡ್ಲಿಮಟ್ಟಿ, ಶಿವರಾಜ ಬಿರಾದಾರ ಇದ್ದರು.

ವಿದ್ಯಾರ್ಥಿ ಸಚಿನ್ ಸ್ವಾಗತಿಸಿ, ಸಿದ್ಧಾರ್ಥ ವಂದಿಸಿದರು. ಸ್ನೇಹಾ ಮತ್ತು ಮಧು ನಿರೂಪಿಸಿದರು. ಇದೇ ವೇಳೆ 9ನೇ ತರಗತಿ ವಿದ್ಯಾರ್ಥಗಳು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪೆನ್ನು, ಪ್ಯಾಡ್‌ ವಿತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.