ADVERTISEMENT

ಪರಿಹಾರ ವಿಳಂಬ: ಶಾಸಕ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2017, 7:41 IST
Last Updated 20 ಮಾರ್ಚ್ 2017, 7:41 IST

ಔರಾದ್: ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಸರ್ಕಾರ ಪರಿಹಾರ ನೀಡಲು ವಿಳಂಬ ಮಾಡುತ್ತಿದೆ ಎಂದು ಶಾಸಕ ಪ್ರಭು ಚವಾಣ್ ದೂರಿದರು.

ಈಚೆಗೆ ಆತ್ಮಹತ್ಯೆ ಮಾಡಿಕೊಂಡ ರೈತ ಶಿವರಾಜ ಅವರ ಮನೆಗೆ ಶನಿವಾರ ಭೇಟಿ ನೀಡಿದ ನಂತರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ಅವರು, ಒಂದೇ ತಿಂಗಳಲ್ಲಿ ಈ ತಾಲ್ಲೂಕಿನ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸತತ ಮೂರು ವರ್ಷಗಳ ಬರಗಾಲ ಮತ್ತು ಈ ವರ್ಷ ಅತಿವೃಷ್ಟಿಯಿಂದ ತಾಲ್ಲೂಕಿನ ರೈತ ಕಂಗಾಲಾಗಿದ್ದಾನೆ. ಈ ನಡುವೆ ಬ್ಯಾಂಕ್ ಮತ್ತು ಖಾಸಗಿ ಸಾಲಗಾರರ ಕಾಟದಿಂದ ರೈತರು ಬದುಕಿನ ಭರವಸೆ ಕಳೆದುಕೊಂಡು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಕಳೆದ ಒಂದು ವರ್ಷದಲ್ಲಿ ನಾಲ್ವರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಇನ್ನು ಇಬ್ಬರು ರೈತರಿಗೆ ಪರಿಹಾರ ಸಿಕ್ಕಿಲ್ಲ ಎಂದರು.

ಶಾಸಕ ₹10 ಸಾವಿರ ವೈಯಕ್ತಿಕ ಪರಿಹಾರ ನೀಡಿದರು. ಮೃತ ರೈತರ ಮಕ್ಕಳ ಶಿಕ್ಷಣ ಮತ್ತು ಹೆಣ್ಣು ಮಕ್ಕಳ ಮದುವೆಗೂ ಆರ್ಥಿಕ ಸಹಾಯ ಮಾಡುವುದಾಗಿ ಹೇಳಿದರು. ಜಿಲ್ಲಾ ಪಂಚಾಯಿತಿ ಸದಸ್ಯ ಅನೀಲ ಬಿರಾದಾರ, ಮಾರುತಿ ಚವಾಣ್‌, ತಾಲ್ಲೂಕು ಪಂಚಾಯಿತಿ ಸದಸ್ಯ ಸಚಿನ್ ರಾಠೋಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.