ADVERTISEMENT

ಬರ್ಮಾ ಮುಸ್ಲಿಮರ ಹತ್ಯೆ: ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2017, 6:49 IST
Last Updated 9 ಸೆಪ್ಟೆಂಬರ್ 2017, 6:49 IST
ಬರ್ಮಾದಲ್ಲಿ ಅಮಾಯಕ ಮುಸ್ಲಿಮರನ್ನು ಹತ್ಯೆ ಮಾಡಲಾಗುತ್ತಿದೆ ಎಂದು ಆರೋಪಿಸಿ ವಿವಿಧ ಮುಸ್ಲಿಮ್‌ ಸಂಘಟನೆಗಳ ಕಾರ್ಯಕರ್ತರು ಬೀದರ್‌ನಲ್ಲಿ ಶುಕ್ರವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು
ಬರ್ಮಾದಲ್ಲಿ ಅಮಾಯಕ ಮುಸ್ಲಿಮರನ್ನು ಹತ್ಯೆ ಮಾಡಲಾಗುತ್ತಿದೆ ಎಂದು ಆರೋಪಿಸಿ ವಿವಿಧ ಮುಸ್ಲಿಮ್‌ ಸಂಘಟನೆಗಳ ಕಾರ್ಯಕರ್ತರು ಬೀದರ್‌ನಲ್ಲಿ ಶುಕ್ರವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು   

ಬೀದರ್‌: ‘ಬರ್ಮಾದಲ್ಲಿ ಅಮಾಯಕ ಮುಸ್ಲಿಮರ ಹತ್ಯೆ ನಡೆಯುತ್ತಿರುವುದನ್ನು ತಡೆಯಲು ಅಲ್ಲಿನ ಸರ್ಕಾರದ ಮೇಲೆ ಭಾರತ ಒತ್ತಡ ಹಾಕಬೇಕು’ ಎಂದು ಒತ್ತಾಯಿಸಿ ವಿವಿಧ ಮುಸ್ಲಿಂ ಸಂಘಟನೆಗಳು ನಗರದಲ್ಲಿ ಶುಕ್ರವಾರ ಮೆರವಣಿಗೆ ನಡೆಸಿದವು.

ಜಾಮಿಯಾ ಮಸೀದಿಯಿಂದ ಆರಂಭವಾದ ಮೆರವಣಿಗೆ ಗವಾನ್‌ ಚೌಕ್‌, ಅಂಬೇಡ್ಕರ್‌ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ಬಂದಿತು. ಎಐಎಂಐಎಂ ಜಿಲ್ಲಾ ಘಟಕದ ಅಧ್ಯಕ್ಷ ಸಯ್ಯದ್‌ ಮನ್ಸೂರ್‌ ಅಹಮದ್ ಖಾದ್ರಿ, ಅವರು ಪ್ರಧಾನಮಂತ್ರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು.

‘ಕೋಮು ಸೌಹಾರ್ದ ಕಾಯ್ದು ಕೊಳ್ಳಲು ಈ ಅವಕಾಶ ಬಳಸಿಕೊಳ್ಳಬೇಕು. ಮಾನವೀಯ ಆಧಾರದ ಮೇಲೆ ಅವರಿಗೆ ನೆಲೆ ಒದಗಿಸಲು ನೆರವಾಗಬೇಕು’ ಎಂದು ಕೋರಿದರು.
 

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.