ADVERTISEMENT

ಮಕ್ಕಳ ಹಕ್ಕು ಉಲ್ಲಂಘಿಸಿದರೆ ಜೈಲು: ಈಶ್ವರ

ಹರಿಜನ–ಬುಡಕಟ್ಟು ಜನರ ಜಾಗೃತಿ ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2017, 9:02 IST
Last Updated 24 ಮಾರ್ಚ್ 2017, 9:02 IST

ಔರಾದ್: ಮಕ್ಕಳು ಮತ್ತು ಮಹಿಳೆಯರ ಹಕ್ಕುಗಳ ಉಲ್ಲಂಘನೆ ಪ್ರಕರಣಗಳನ್ನು ಕಾನೂನು ಸೇವಾ ಪ್ರಾಧಿಕಾರ ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ಇಲ್ಲಿಯ ಸಿವಿಲ್ ನ್ಯಾಯಾಧೀಶ ಈಶ್ವರ ಹೇಳಿದರು.

ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಬುಧವಾರ ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆ ಅಡಿ ಹರಿಜನ ಹಾಗೂ ಬುಡಕಟ್ಟು ಜನರ ಅಭಿವೃದ್ಧಿ ಕುರಿತು ಜಾಗೃತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಮಕ್ಕಳು ಮತ್ತು ಮಹಿಳೆಯರ ಮೇಲೆ ದೌರ್ಜನ್ಯ ಆದಾಗ ಕಾನೂನು ಸೇವಾ ಪ್ರಾಧಿಕಾರ ತನ್ನ ಅಧಿಕಾರ ಬಳಸಿ ನ್ಯಾಯ ಕೊಡಿಸುತ್ತದೆ. ಕೆಲ ಪ್ರಕರಣಗಳಲ್ಲಿ ಪೊಲೀಸರು ಪ್ರಕರಣ ದಾಖಲಿಸದೆ ಇದ್ದಾಗ ಪ್ರಾಧಿಕಾರ ಮಧ್ಯೆ ಪ್ರವೇಶಿಸುತ್ತದೆ ಎಂದು ಹೇಳಿದರು.

6 ರಿಂದ 14 ವರ್ಷದ ಒಳಗಿನ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕೊಡಲು ಸಂವಿಧಾನದಲ್ಲಿ ಹೇಳಲಾಗಿದೆ. ಈ ನಿಟ್ಟಿನಲ್ಲಿ ಮಕ್ಕಳ ಶಿಕ್ಷಣ, ಮನೋ ರಂಜನೆ, ಪೌಷ್ಟಿಕ ಆಹಾರದ  ಹಕ್ಕು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದರು.

ಹಿರಿಯ ಶ್ರೇಣಿ ಸಿವಿಲ್ ನ್ಯಾಯಾ ಧೀಶೆ ಶೈನಿ ಕೆ.ಎಂ. ಮಾತನಾಡಿ, ಮಕ್ಕ ಳನ್ನು ಉತ್ತಮ ನಾಗರಿಕರಾಗಿ ಮಾಡುವ ಜವಾಬ್ದಾರಿ ಪಾಲಕರು ಮತ್ತು ಸಮಾ ಜದ್ದು. ಮಕ್ಕಳು ತಪ್ಪು ಮಾಡಿದಾಗ ಅವರಿಗೆ ತಿಳಿ ಹೇಳಿ ಸರಿ ಮಾಡಬೇಕು. ಇಲ್ಲವಾ ದಲ್ಲಿ ಅವರು ದೊಡ್ಡವರಾದ ಮೇಲೆ ಅದೇ ತಪ್ಪು ಮಾಡಿ ಶಿಕ್ಷೆ ಅನು ಭವಿಸಬೇಕಾಗುತ್ತದೆ ಎಂದರು.

ತಹಶೀಲ್ದಾರ್ ಎಂ. ಚಂದ್ರಶೇಖರ ಮಾತನಾಡಿ, ಮಕ್ಕಳ ಹಕ್ಕುಗಳ ರಕ್ಷಣೆಗೆ ಸರ್ಕಾರ ವಿಶೇಷ ಕಾಳಜಿ ವಹಿಸಿದೆ. ಅಂಗನವಾಡಿ ಮೂಲಕ ಮಕ್ಕಳಿಗೆ ಪೌಷ್ಟಿಕ ಆಹಾರ ಪೂರೈಸಿ ಅವರನ್ನು ದೈಹಿಕ ಮತ್ತು ಮಾನಸಿಕವಾಗಿ ಸದೃಢ ರನ್ನಾಗಿ  ಮಾಡುವ ಉದ್ದೇಶ ಹೊಂದಿದೆ ಎಂದು ತಿಳಿಸಿದರು.

ತಾ.ಪಂ ಮುಖ್ಯಾಧಿಕಾರಿ ಜಗನ್ನಾಥ ಮೂರ್ತಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಎಸ್‌. ದೇಶಪಾಂಡೆ, ನಿರ್ದೇಶಕ ಅರ್ಜು ನ ಸಿತಾಳಗೇರಾ, ತಾಲ್ಲೂಕು ಬಾಲ ಕಾ ರ್ಮಿಕ ಅಧಿಕಾರಿ ಕೆ. ಸುವರ್ಣಾ, ನಾಗ ನಾಥ ಬಂಗಾರೆ  ಇದ್ದರು. ಇದೇ ವೇಳೆ ಮಕ್ಕಳಿಗೆ ಬ್ಯಾಗ್‌ ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.