ADVERTISEMENT

ವೇತನ ತಾರತಮ್ಯ ಪರಿಹಾರ: ಭರವಸೆ

​ಪ್ರಜಾವಾಣಿ ವಾರ್ತೆ
Published 6 ಜುಲೈ 2015, 6:46 IST
Last Updated 6 ಜುಲೈ 2015, 6:46 IST

ಹುಮನಾಬಾದ್‌: ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ನಡುವಿನ ವೇತನ ತಾರತಮ್ಯವನ್ನು ವರ್ಷದಲ್ಲಿ ಇತ್ಯರ್ಥ ಪಡಿಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಿ.ಪಿ.ಮಂಜೆಗೌಡ ಹೇಳಿದರು.

ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಭಾನುವಾರ ಏರ್ಪಡಿಸಿದ್ದ ಸಂಘದ ತಾಲ್ಲೂಕು ಸಮಾವೇಶದಲ್ಲಿ ಅವರು ಮಾತನಾಡಿದರು. ಸಂಘದ ರಾಜ್ಯ ಘಟಕ ಗೌರವಾಧ್ಯಕ್ಷ ಎಚ್‌.ರಾಮು, ಕಾರ್ಯದರ್ಶಿ ಪಾಂಡು ಪಟೇಲ, ಖಜಾಂಚಿ ಯೋಗಾನಂದ ಮಾತನಾಡಿದರು.

ಸಂಘದ ಪದಾಧಿಕಾರಿಗಳ ನಡುವೆ ಕಲಹ ಹುಟ್ಟಿಸುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು. ಜಿಲ್ಲಾ ಸಂಘದ ಪದಾಧಿಕಾರಿಗಳ ಪ್ರತ್ಯೇಕ ಸಭೆ ನಡೆಸಿ, ಸಮಸ್ಯೆ ಆಲಿಸಬೇಕು ಎಂದು  ತಾಲ್ಲೂಕು ಅಧ್ಯಕ್ಷ ನಾಗಶೆಟ್ಟಿ ಡುಮಣಿ ರಾಜ್ಯಾಧ್ಯಕ್ಷರಿಗೆ ಮನವಿ ಮಾಡಿದರು.

ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಶಿಕ್ಷಕರನ್ನು ಬಳಸಿಕೊಳ್ಳದಂತೆ ಸರ್ಕಾರದ ಮನ ಒಲಿಸಬೇಕು. ಸರ್ಕಾರಿ  ಪ್ರಾಥಮಿಕ ಶಾಲೆಗೆ ಒಬ್ಬ ಗುಮಾಸ್ತ ಮತ್ತು ಸೇವಕರನ್ನು ನಿಯೋಜಿಸಲು ಕೋರಬೇಕು ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರವೀಂದ್ರರೆಡ್ಡಿ ನೌಕರರ ಸಂಘದ ರಾಜ್ಯ ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು. ಸಂಘದ ಕಾರ್ಯದರ್ಶಿ ರೇವಣಯ್ಯ ಸ್ವಾಮಿ, ಸದಸ್ಯರಾದ ಗೋರಖನಾಥ ದಾಡಗೆ, ಮಾಣಿಕರಾವ ಸಾಗರ್‌, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಮುರಗೇಂದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.