ADVERTISEMENT

ಕಾರಂಜಾ ಜಲಾಶಯದಿಂದ ನೀರು ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2018, 14:56 IST
Last Updated 2 ಅಕ್ಟೋಬರ್ 2018, 14:56 IST

ಬೀದರ್‌: ಜಿಲ್ಲೆಯ ಕಾರಂಜಾ ಜಲಾಶಯದಿಂದ ಅಕ್ಟೋಬರ್ 3ರಂದು ಸಂಜೆ ಮಾಂಜರಾ ನದಿಗೆ ಹಗುರವಾಗಿ 100 ಕ್ಯೂಸೆಕ್ಸ್ ನೀರು ಬಿಡಲಾಗುವುದು. ನದಿ ದಂಡೆ ಗ್ರಾಮಗಳ ಜನರು ಹಾಗೂ ರೈತರು ಎಚ್ಚರಿಕೆ ವಹಿಸಬೇಕು ಎಂದು ಕಾರಂಜಾ ಯೋಜನೆಯ ಕಾರ್ಯನಿರ್ವಾಹಕ ಎಂಜಿನಿಯರ್‌ ತಿಳಿಸಿದ್ದಾರೆ.

ಭಾಲ್ಕಿ ಪಟ್ಟಣ ಹಾಗೂ ನದಿ ದಂಡೆ ಗ್ರಾಮಗಳ ಜನರ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಕಲಬುರ್ಗಿ ಪ್ರಾದೇಶಿಕ ಆಯುಕ್ತರು ಕಾರಂಜಾ ಜಲಾಶಯದಿಂದ ಮಾಂಜರಾ ನದಿಗೆ ನೀರು ಬಿಡಲು ಸೂಚನೆ ನೀಡಿದ್ದಾರೆ.

ಸಣ್ಣ ನೀರಾವರಿ ಇಲಾಖೆ ಅಧೀನದ ಬ್ಯಾರೇಜ್‌ಗಳಿಗೆ ಅಳವಡಿಸಲಾದ ಗೇಟ್‌ ತೆಗೆದು ನೀರು ಮುಂದಕ್ಕೆ ಹರಿದು ಹೋಗಲು ಅನುಕೂಲ ಮಾಡಿಕೊಡಬೇಕು ಎಂದು ಸೂಚಿಸಿದ್ದಾರೆ.

ADVERTISEMENT

15 ರಂದು ಸಚಿವರಿಂದ ಜನಸಂಪರ್ಕ ಸಭೆ
ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಕಾಶೆಂಪೂರ ಅಕ್ಟೋಬರ್ 15ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ರಂಗ ಮಂದಿರದಲ್ಲಿ ಜನಸಂಪರ್ಕ ಸಭೆ ನಡೆಸಲಿದ್ದಾರೆ.

ಸಾರ್ವಜನಿಕರು, ತಮ್ಮ ಕುಂದು-ಕೊರತೆ, ಅಹವಾಲುಗಳನ್ನು ನಗರದ ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.