ADVERTISEMENT

‘ಅಂಗವಿಕಲ ಮಕ್ಕಳಿಗೆ ಆತ್ಮವಿಶ್ವಾಸ ತುಂಬಿ’

ಹಿರಿಯ ಪ್ರಾಥಮಿಕ, ಪ್ರೌಢಶಾಲೆಯ ಜಿಲ್ಲಾಮಟ್ಟದ ಕ್ರೀಡಾಕೂಟ ಆರಂಭ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2017, 9:40 IST
Last Updated 11 ಫೆಬ್ರುವರಿ 2017, 9:40 IST
ಚಾಮರಾಜನಗರದ ಜೆಎಸ್‌ಎಸ್‌ ಮಹಿಳಾ ಕಾಲೇಜಿನ ಆವರಣದಲ್ಲಿ ಶುಕ್ರವಾರ ನಡೆದ 14 ಮತ್ತು 17 ವರ್ಷದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಅಂಗವಿಕಲ ಮಕ್ಕಳ ಜಿಲ್ಲಾಮಟ್ಟದ ಕ್ರೀಡಾಕೂಟವನ್ನು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಚ್.ವಿ. ಚಂದ್ರು ಶಾಟ್‌ಪಟ್‌ ಎಸೆಯುವ ಮೂಲಕ ಚಾಲನೆ ನೀಡಿದರು. ಎಂ. ರಾಮಚಂದ್ರ, ಪಿ.ಎನ್. ದಯಾನಿಧಿ ಇದ್ದಾರೆ
ಚಾಮರಾಜನಗರದ ಜೆಎಸ್‌ಎಸ್‌ ಮಹಿಳಾ ಕಾಲೇಜಿನ ಆವರಣದಲ್ಲಿ ಶುಕ್ರವಾರ ನಡೆದ 14 ಮತ್ತು 17 ವರ್ಷದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಅಂಗವಿಕಲ ಮಕ್ಕಳ ಜಿಲ್ಲಾಮಟ್ಟದ ಕ್ರೀಡಾಕೂಟವನ್ನು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಚ್.ವಿ. ಚಂದ್ರು ಶಾಟ್‌ಪಟ್‌ ಎಸೆಯುವ ಮೂಲಕ ಚಾಲನೆ ನೀಡಿದರು. ಎಂ. ರಾಮಚಂದ್ರ, ಪಿ.ಎನ್. ದಯಾನಿಧಿ ಇದ್ದಾರೆ   

ಚಾಮರಾಜನಗರ: ‘ಸಾಮಾನ್ಯ ಮಕ್ಕಳಂತೆ ಅಂಗವಿಕಲ ಮಕ್ಕಳು ಕೂಡ ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಳ್ಳಲು ಅವರಿಗೆ ಆತ್ಮವಿಶ್ವಾಸ ತುಂಬಿ ಪ್ರೇರೇಪಿಸಬೇಕು’ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಚ್.ವಿ. ಚಂದ್ರು ಸಲಹೆ ನೀಡಿದರು.

ನಗರದ ಜೆಎಸ್‌ಎಸ್‌ ಮಹಿಳಾ ಕಾಲೇಜಿನ ಆವರಣದಲ್ಲಿ ಶುಕ್ರವಾರ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಯಿಂದ ನಡೆದ 14 ಮತ್ತು 17 ವರ್ಷದ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಅಂಗವಿಕಲ ಮಕ್ಕಳ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲೆಯ ಮೇಲಾಜಿಪುರದ ಪ್ರಭು ಸ್ವಾಮಿ ಅವರು ಅಂಗವಿಕಲರ ಪ್ಯಾರಾ ಒಲಿಂಪಿಕ್‌ನಲ್ಲಿ ಚಿನ್ನದ ಪದಕ ಪಡೆದು ಜಿಲ್ಲೆ ಹಾಗೂ ರಾಜ್ಯಕ್ಕೆ ಕೀರ್ತಿ ತಂದಿ ದ್ದಾರೆ. ಅವರು ಅಂಗವಿಕಲ ಮಕ್ಕಳಿಗೆ ಸ್ಫೂರ್ತಿ. ಪ್ರಭುಸ್ವಾಮಿ ಅವರ ಮುಂದಿನ ಹಂತದ ಸ್ಪರ್ಧೆಗೆ ತಗಲುವ ವೆಚ್ಚವನ್ನು ತಾಲ್ಲೂಕು ಪಂಚಾಯಿತಿಯಿಂದ ಭರಿಸಲು ಚರ್ಚಿಸಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಮಂಜುಳಾ ಮಾತನಾಡಿ, ಅಂಗವಿಕಲ ಮಕ್ಕಳಿಗೆ ಕ್ರೀಡಾಕೂಟ ನಡೆಸಲು ಇದು ಸರಿಯಾದ ಕಾಲವಲ್ಲ. ಹೆಚ್ಚು ಬಿಸಿಲು ಹಾಗೂ ಪರೀಕ್ಷೆಯ ಒತ್ತಡ ಮಕ್ಕಳ ಮೇಲಿದೆ. ಹಾಗಾಗಿ, ಮುಂದಿನ ದಿನ ಗಳಲ್ಲಿ ಸಾಮಾನ್ಯ ಮಕ್ಕಳಿಗೆ ಆಯೋಜಿಸು ವಂತೆ ಅಂಗವಿಕಲ ಮಕ್ಕಳಿಗೂ ಆಗಸ್ಟ್‌ ನಲ್ಲಿಯೇ ಕ್ರೀಡಾಕೂಟ ಆಯೋಜಿಸಬೇಕು ಎಂದು ಹೇಳಿದರು.

ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಜೆ. ಜಾರ್ಜ್‌ ಫಿಲಿಪ್‌ ಮಾತನಾಡಿ, ಈ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನಗಳಿಸಿದ ಮಕ್ಕಳು ದೊಡ್ಡಬಳ್ಳಾಪುರದಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾ ಕೂಟದಲ್ಲಿ ಸ್ಪರ್ಧಿಸಲಿದ್ದಾರೆ ಎಂದರು.

ಕ್ರೀಡಾಕೂಟದಲ್ಲಿ ಚಾಮರಾಜ ನಗರ, ಗುಂಡ್ಲುಪೇಟೆ, ಯಳಂದೂರು, ಕೊಳ್ಳೇಗಾಲ ಹಾಗೂ ಹನೂರಿನಿಂದ 50ಕ್ಕೂ ಹೆಚ್ಚು ಅಂಗವಿಕಲ ಮಕ್ಕಳು ಭಾಗವಹಿಸಿದ್ದರು. ನ್ಯೂನತೆ ಆಧಾರದಲ್ಲಿ ಪೂರ್ಣ ಅಂಧರು, ಭಾಗಶಃ ಅಂಧರು, ಒಂದು ಕೈ ನ್ಯೂನತೆ, ಒಂದು ಕಾಲು ನ್ಯೂನತೆ, ಶ್ರವಣ ಮತ್ತು ವಾಕ್‌ ದೋಷ ಇರುವ ಮಕ್ಕಳಿಗೆ ಪ್ರತ್ಯೇಕವಾಗಿ ಗುಂಡು ಎಸೆತ, ಭರ್ಜಿ ಎಸೆತ, ಉದ್ದ ಜಿಗಿತ, 50 ಮೀ. ಓಟ, 100 ಮೀ. ಓಟ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ರಾಮಚಂದ್ರ, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಪಿ.ಎನ್. ದಯಾನಿಧಿ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್. ಸ್ವಾಮಿ, ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ರಂಗಸ್ವಾಮಿ, ಜಿಲ್ಲಾ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷೆ ಎನ್‌. ನೇತ್ರಾವತಿ, ತಾಲ್ಲೂಕು ಅಧ್ಯಕ್ಷ ಪ್ರಕಾಶ್‌, ಜಿಲ್ಲಾ ಅಂಗವಿಕಲರ ಸಂಘದ ಅಧ್ಯಕ್ಷ ರಂಗಸ್ವಾಮಿ, ತಾಲ್ಲೂಕು ಸಂಚಾಲಕ ರಾಜೇಶ್‌, ಮುಖ್ಯಶಿಕ್ಷಕ ನಂಜುಂಡಸ್ವಾಮಿ ಹಾಜರಿದ್ದರು.

* ಶಿಕ್ಷಕರು ಅಂಗವಿಕಲ ಮಕ್ಕಳಿಗೆ ಉತ್ತಮ ತರಬೇತಿ ನೀಡಿ, ಅವರ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸ ಬೇಕು. ರಾಜ್ಯ, ರಾಷ್ಟ್ರಮಟ್ಟದ ಕ್ರೀಡೆಗೆ ಪ್ರೋತ್ಸಾಹ ನೀಡಬೇಕು
ಎಚ್.ವಿ. ಚಂದ್ರು, ಅಧ್ಯಕ್ಷ, ತಾಲ್ಲೂಕು ಪಂಚಾಯಿತಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT