ADVERTISEMENT

ಅಷ್ಟಾಂಗಮಾರ್ಗ ಅನುಸರಿಸಿ

ಬೌದ್ಧ ಬಿಕ್ಕು ಸುಗತಪಾಲ ಬಂತೇಜಿ ಸಲಹೆ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2017, 8:32 IST
Last Updated 14 ಏಪ್ರಿಲ್ 2017, 8:32 IST

ಚಾಮರಾಜನಗರ: ‘ಪ್ರತಿಯೊಬ್ಬರು ಬುದ್ಧನ ಅಷ್ಟಾಂಗಮಾರ್ಗ ಅನುಸರಿಸ ಬೇಕು. ಪಂಚಶೀಲ ತತ್ವ ಪಾಲಿಸಬೇಕು. ದುಶ್ಚಟಗಳಿಂದ ದೂರವಿರಬೇಕು’ ಎಂದು ಬೌದ್ಧ ಬಿಕ್ಕು ಸುಗತಪಾಲ ಬಂತೇಜಿ ಸಲಹೆ ನೀಡಿದರು.

ತಾಲ್ಲೂಕಿನ ಹೆಬ್ಬಸೂರು ಗ್ರಾಮದ ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಈಚೆಗೆ ಹುಣ್ಣಿಮೆಯ ಅಂಗವಾಗಿ ನಡೆದ ಧಮ್ಮ ದೀಪಾ ಕಾರ್ಯಕ್ರಮದಲ್ಲಿ ಬುದ್ಧನ ಪ್ರತಿಮೆಗೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.

ಬೌದ್ಧ ಧರ್ಮದಲ್ಲಿ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಲಾಗಿದೆ. ಹಾಗಾಗಿ, ಅಂಬೇಡ್ಕರ್ ಅವರು ಬೌದ್ಧ ಧರ್ಮ ಸ್ವೀಕರಿಸಿದರು. ಬುದ್ಧ ಮಾರ್ಗ ಅನುಸರಿಸಿದರು. ಅವರಂತೆ ಎಲ್ಲರು ಭೀಮಮಾರ್ಗದಲ್ಲಿ ನಡೆಯಬೇಕು. ಮೌಲ್ಯಯುತ ಬದುಕಿಗೆ ಈ ಮಾರ್ಗ ಉತ್ತಮವಾಗಿದೆ ಎಂದು ತಿಳಿಸಿದರು.

ಬಳಿಕ, ಅವರು ಪಂಚಶೀಲ ಫೌಂಡೇಶನ್‌ನ ಪದಾಧಿಕಾರಿಗಳೊಂದಿಗೆ ಗ್ರಾಮದ ಮನೆಗಳಿಗೆ ತೆರಳಿ ಭಿಕ್ಷಾಟನೆ ಮಾಡಿ ಬುದ್ಧನ ಸಂದೇಶ ಸಾರಿದರು.
ಕಾರ್ಯಕ್ರಮದಲ್ಲಿ ಪಂಚಶೀಲ ಫೌಂಡೇಶನ್‌ನ ಪ್ರಧಾನ ಕಾರ್ಯದರ್ಶಿ ಸೋಮಣ್ಣ, ಉಪಾಧ್ಯಕ್ಷ ಬಂಗಾರ ಸ್ವಾಮಿ, ಮುಖಂಡರಾದ ಸಿ.ಎಂ.ಕೃಷ್ಣ ಮೂರ್ತಿ, ಆರ್.ಪಿ.ಮಹೇಶ್, ರಾಜೇಂದ್ರ, ಸೇತುಕುಮಾರ್, ಉಮೇಶ್, ವೀರಭದ್ರಸ್ವಾಮಿ ಇದ್ದರು.

ಅಂಬೇಡ್ಕರ್ ಪ್ರತಿಮೆಗೆ ಪುಷ್ಪನಮನ
ಚಾಮರಾಜನಗರ:
ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌್ ಅವರ ಜನ್ಮ ದಿನಾಚರಣೆ ಅಂಗವಾಗಿ ಏ. 14ರಂದು ಬೆಳಿಗ್ಗೆ 10.30ಕ್ಕೆ ದಲಿತ ಸಂಘಟನೆಗಳ ಒಕ್ಕೂಟದಿಂದ ನಗರದ ಜಿಲ್ಲಾಡಳಿತ ಭವನದ ಮುಂಭಾಗ ಇರುವ ಅಂಬೇಡ್ಕರ್‌ ಪ್ರತಿಮೆಗೆ ಪುಷ್ಪನಮನ ಸಲ್ಲಿಸಲಾಗುವುದು.

ಜಿಲ್ಲೆಯ ಎಲ್ಲ ದಲಿತ ಸಂಘಟನೆಗಳ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಆಗಮಿ ಸಬೇಕು ಎಂದು ಸಂಘಟನೆ ಜಿಲ್ಲಾ ಸಂಚಾಲಕ ಸಿ.ಎಂ. ಕೃಷ್ಣಮೂರ್ತಿ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.