ADVERTISEMENT

ಕ್ರಿಶ್ಚಿಯನ್ ಭವನ ನಿರ್ಮಾಣಕ್ಕೆ ಭೂಮಿಪೂಜೆ

​ಪ್ರಜಾವಾಣಿ ವಾರ್ತೆ
Published 28 ಜೂನ್ 2016, 10:57 IST
Last Updated 28 ಜೂನ್ 2016, 10:57 IST

ಚಾಮರಾಜನಗರ: ಕ್ರಿಶ್ಚಿಯನ್‌ ಸಮುದಾ ಯದವರು ಸರ್ಕಾರದ ಸೌಲಭ್ಯ ಸದ್ಬಳಕೆ ಮಾಡಿಕೊಂಡು ಮುಖ್ಯವಾಹಿನಿಗೆ ಬರಬೇಕು ಎಂದು ಸಂಸದ ಧ್ರುವನಾರಾಯಣ ಸಲಹೆ ನೀಡಿದರು. ತಾಲ್ಲೂಕಿನ ಮಸಗಾಪುರ ಗ್ರಾಮ ದಲ್ಲಿ ಇತ್ತೀಚೆಗೆ ಕ್ರಿಶ್ಚಿಯನ್ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಕ್ರಿಶ್ಚಿಯನ್ ಸಮುದಾಯದವರು ಲಭ್ಯವಿರುವ ನಿವೇಶನದಲ್ಲಿ ಭವನ ನಿರ್ಮಿಸಿಕೊಂಡು ಸಮಾರಂಭಗಳಿಗೆ ಬಳಸಿಕೊಳ್ಳಬೇಕು ಎಂದರು. ಗ್ರಾಮದಲ್ಲಿ ಸಮುದಾಯ ಭವನ ನಿರ್ಮಾಣ ಮಾಡಿಕೊಡಬೇಕು ಎಂದು ಮುಖಂಡರು ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿ ಸಂಸದರ ಪ್ರದೇಶಾಭಿ ವೃದ್ಧಿ ನಿಧಿಯಡಿ ₹ 5 ಲಕ್ಷ ಅನುದಾನ ಮಂಜೂರು ಮಾಡಲಾಗಿದೆ ಎಂದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ ಸಂಸದೀಯ ಕಾರ್ಯದರ್ಶಿ ಸಿ. ಪುಟ್ಟ ರಂಗಶೆಟ್ಟಿ ಮಾತನಾಡಿ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಮಸೀದಿ, ಚರ್ಚ್‌ಗಳ ಜೀರ್ಣೋದ್ಧಾರಕ್ಕೆ ಆರ್ಥಿಕ ನೆರವು ನೀಡಲಾಗುತ್ತಿದೆ. ಗ್ರಾಮದ ಕ್ರಿಶ್ಚಿಯನ್ ಸಮುದಾಯ ಭವನ ನಿರ್ಮಾಣಕ್ಕೆ ಶಾಸಕರ ಪ್ರದೇಶಾ ಭಿವೃದ್ಧಿ ನಿಧಿಯಡಿ ₹ 5 ಲಕ್ಷ ಅನುದಾನ ನೀಡಲಾಗುವುದು ಎಂದು ತಿಳಿಸಿದರು.

ಈಗಾಗಲೇ, ಚಾಮರಾಜನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ದೊಡ್ಡರಾಯಪೇಟೆ, ಕಿರಗಸೂರು ಗ್ರಾಮದ ಚರ್ಚ್‌ಗಳ ಜೀರ್ಣೋದ್ಧಾರಕ್ಕೆ ತಲಾ ₹ 15 ಲಕ್ಷ ಅನುದಾನ ಮಂಜೂರಾಗಿದೆ ಎಂದರು.

ಜಿ.ಪಂ. ಸದಸ್ಯ ಸಿ.ಎನ್. ಬಾಲರಾಜ್ ಮಾತನಾಡಿ, ಜಿಲ್ಲಾ ಪಂಚಾಯಿತಿ ಯಿಂದ ₹ 5 ಲಕ್ಷ ವೆಚ್ಚದಲ್ಲಿ ಗ್ರಾಮಕ್ಕೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗುವುದು ಎಂದರು.ಗ್ರಾ.ಪಂ. ಅಧ್ಯಕ್ಷ ಸಿದ್ದರಾಜು, ತಾ.ಪಂ. ಮಾಜಿ ಸದಸ್ಯ ರಾಜು, ಮುಖಂಡರಾದ ಹೇಮಚಂದ್ರ ಕುಮಾರ್, ವಿನಯ್, ಸ್ಟೀಫನ್, ವಸಂತ ರಾಜ್, ಕ್ರಿಸ್ಟಿಫರ್, ಸುರೇಶ್‌ಕುಮಾರ್, ದೇವುದಾನ ಸುಂದರ್, ಸಾಧು ಸುಂದರ್, ಆನಂದಮೂರ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.