ADVERTISEMENT

ಗುಂಡ್ಲುಪೇಟೆ: ಚೆಕ್‌ಪೋಸ್ಟ್‌ಗಳಲ್ಲಿ ಅಕ್ರಮ?

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2017, 8:13 IST
Last Updated 24 ಮಾರ್ಚ್ 2017, 8:13 IST

ಗುಂಡ್ಲುಪೇಟೆ: ಉಪ ಚುನಾವಣೆ ಅಂಗವಾಗಿ ಪೊಲೀಸ್, ಕಂದಾಯ ಮತ್ತು ಅರಣ್ಯ ಇಲಾಖೆಗಳು ತಾಲ್ಲೂಕಿನ ವಿವಿಧ ಸ್ಥಳಗಳಲ್ಲಿ ನಿರ್ಮಿಸಿರುವ ಚೆಕ್‌ ಪೋಸ್ಟ್‌ಗಳಲ್ಲಿ ವಾಹನ ತಪಾಸಣೆ ಮಾಡದೆ ಬಿಡಲಾಗುತ್ತಿದೆ ಎಂಬ ದೂರು ಕೇಳಿಬಂದಿದೆ.

ಚುನಾವಣಾ ಅಕ್ರಮ ತಡೆಯಲು ಮದ್ದೂರು ಚೆಕ್‌ಪೋಸ್ಟ್‌ನಲ್ಲಿ ತಪಾಸಣಾ ಕೇಂದ್ರ ತೆರೆಯಲಾಗಿದೆ. ಆದರೆ, ಅಧಿಕಾರಿಗಳು ಹಣ ಪಡೆದು ವಾಹನ ತಪಾಸಣೆ ಮಾಡದೆ ಬಿಡುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಅಕ್ರಮ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಈಗಾಗಲೇ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಮದ್ದೂರು ಚೆಕ್‌ಪೋಸ್ಟ್‌ನಲ್ಲಿ ಎಎಸ್ಐ, ಕಾನ್‌ ಸ್ಟೆಬಲ್, ಗ್ರಾಮಲೆಕ್ಕಾಧಿಕಾರಿ ಹಾಗೂ ಅರಣ್ಯ ಸಿಬ್ಬಂದಿ ನಿಯೋಜಿಸಲಾಗಿದೆ. ಆದರೆ, ಅಕ್ರಮ ತಡೆಯಬೇಕಾದ ಅಧಿ ಕಾರಿಗಳು ಆರಾಮವಾಗಿ ಕಾಲ ಕಳೆಯುತ್ತಿದ್ದಾರೆ. ತಪಾಸಣೆ ನೆಪದಲ್ಲಿ ಕೇರಳಕ್ಕೆ ತೆರಳುವ ತರಕಾರಿ ಟೆಂಪೊ, ಆಟೊ, ಲಾರಿಗಳಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಕ್ಷೇತ್ರದ 11 ಕಡೆ ತಪಾಸಣಾ ಕೇಂದ್ರ ತೆರೆಯಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

‘ಚುನಾವಣಾ ಅಕ್ರಮ ತಡೆಗಟ್ಟಲು ಚೆಕ್‌ಪೋಸ್ಟ್‌ಗಳಲ್ಲಿ ಸಿಬ್ಬಂದಿ ನಿಯೋ ಜಿಸಲಾಗಿದೆ. ತಪಾಸಣೆ ಕೂಡ ಮಾಡಲಾ ಗುತ್ತಿದೆ. ಕಡ್ಡಾಯವಾಗಿ ಎಲ್ಲಾ ವಾಹನ ತಪಾಸಣೆ ಮಾಡುವಂತೆ ಸೂಚಿಸಲಾಗು ವುದು’ ಎಂದು ಚುನಾವಣಾಧಿಕಾರಿ ನಳೀನ್‌ ಅತುಲ್ ತಿಳಿಸಿದರು.

‘ನನ್ನ ಗಮನಕ್ಕೆ ಈ ವಿಚಾರ ಬಂದಿಲ್ಲ. ಈ ಬಗ್ಗೆ ವಿಚಾರಣೆ ಮಾಡಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗು ವುದು’ ಎಂದು ಸ್ಪೆಕ್ಟರ್ ಅಧಿಕಾರಿ ಮುರುಗೇಶ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.