ADVERTISEMENT

ಪತ್ರಕರ್ತರಿಗೆ ಶಿಕ್ಷೆ ಆದೇಶ; ಖಂಡನೆ

​ಪ್ರಜಾವಾಣಿ ವಾರ್ತೆ
Published 1 ಜುಲೈ 2017, 8:36 IST
Last Updated 1 ಜುಲೈ 2017, 8:36 IST

ಗುಂಡ್ಲುಪೇಟೆ: ಇಬ್ಬರು ಪತ್ರಕರ್ತರಿಗೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿರುವ ವಿಧಾನಸಭೆ ಸದನದ ಕ್ರಮವನ್ನು ಖಂಡಿಸಿ ಗುಂಡ್ಲುಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಮೌನ ಪ್ರತಿಭಟನೆ ನಡೆಸಿದರು.

ಪಟ್ಟಣದ ಪ್ರವಾಸಿಮಂದಿರದಿಂದ  ಮೆರವಣಿಗೆ ನಡೆಸಿದರು. ಈ ಶಿಕ್ಷೆ ಆದೇಶವನ್ನು ವಾಪಸು ಪಡೆಯಬೇಕು ಎಂದು ಒತ್ತಾಯಿಸಿದರು. ನಂತರ ಉಪ ತಹಶೀಲ್ದಾರ್ ಕಮಲಮ್ಮ ಅವರಿಗೆ ಮನವಿ ಸಲ್ಲಿಸಿದರು. ಪಟ್ಟಣದ ವಿವಿಧ ಪತ್ರಕರ್ತರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT