ADVERTISEMENT

ಬಂಡೀಪುರ; ಉತ್ತಮ ಮಳೆ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2017, 6:34 IST
Last Updated 12 ಏಪ್ರಿಲ್ 2017, 6:34 IST

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯ ಗ್ರಾಮಗಳಲ್ಲಿ ಮಂಗಳವಾರ ಉತ್ತಮ ಮಳೆಯಾಗಿದೆ. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ ಯಿಂದ ಭೂಮಿ ತಂಪಾಗಿದೆ.

ಕಳೆದ ವಾರ ಸ್ವಲ್ಪ ಪ್ರಮಾಣದಲ್ಲಿ ಮಳೆಯಾಗಿತ್ತು. ಇದರಿಂದ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹಸಿರು ಕಾಣಿಸಿಕೊಳ್ಳಲು ಆರಂಭವಾಗಿದೆ.ಕಳೆದ ತಿಂಗಳಿಂದ ಮಳೆ ಇಲ್ಲದೆ ಕಾಡು ಒಣಗಿ ಪ್ರಾಣಿಗಳಿಗೆ ಮೇವು ಕೊರತೆಯಾಗಿತ್ತು. ಈಗ ಮಳೆಯಾದ್ದ ರಿಂದ ಕಾಡು ಚಿಗುರುವ ಸೂಚನೆಗಳು ಕಂಡುಬರುತ್ತಿವೆ.

ಮಳೆಯಾದ್ದರಿಂದ ಕೆರೆಗಳಿಗೆ  ನೀರು ಬಂದಿದ್ದು ಜಾನುವಾರುಗಳಿಗೆ ಉಪಯೋಗವಾಗುತ್ತದೆ.ಹಂಗಳ ಗ್ರಾಮದ ಭಾಗದಲ್ಲಿ ಮತ್ತು ಗೋಪಾಲಸ್ವಾಮಿ ಬೆಟ್ಟದ ಭಾಗದಲ್ಲಿ ಸುಮಾರು 40ಕ್ಕೂ ಹೆಚ್ಚು ನಿಮಿಷ ಮಳೆಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.