ADVERTISEMENT

ಮೈದುಂಬಿ ಹರಿಯುತ್ತಿರುವ ಗಗನಚುಕ್ಕಿ, ಭರಚುಕ್ಕಿ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2017, 6:36 IST
Last Updated 6 ಸೆಪ್ಟೆಂಬರ್ 2017, 6:36 IST
ಕೊಳ್ಳೇಗಾಲ ತಾಲ್ಲೂಕಿನ ಶಿವನಸಮುದ್ರ ಬಳಿ ಭರಚುಕ್ಕಿ ಜಲಪಾತದ ವಿಹಂಗಮ ನೋಟ
ಕೊಳ್ಳೇಗಾಲ ತಾಲ್ಲೂಕಿನ ಶಿವನಸಮುದ್ರ ಬಳಿ ಭರಚುಕ್ಕಿ ಜಲಪಾತದ ವಿಹಂಗಮ ನೋಟ   

ಕೊಳ್ಳೇಗಾಲ: ತಾಲ್ಲೂಕಿನ ಶಿವನಸಮುದ್ರದ ಗಗನಚುಕ್ಕಿ ಮತ್ತು ಭರಚುಕ್ಕಿ ಜಲಪಾತಗಳು ಮೈದುಂಬಿ ಹರಿಯಲಾರಂಭಿಸಿವೆ. ಈ ಮನೋಹರ ದೃಶ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡು ಹರಿದು ಬರುತ್ತಿದೆ.

ಕೆಆರ್‌ಎಸ್ ಜಲಾಶಯದಿಂದ ನೀರು ಹರಿಯಬಿಟ್ಟಿದ್ದು, ಜಲಪಾತ ಕಣ್ಮನ ಸೆಳೆಯುತ್ತಿದೆ. ನೀರಿಲ್ಲದೆ ಬಣಗುಡುತ್ತಿದ್ದ ಜಲಪಾತಗಳು  ದುಮ್ಮಿಕ್ಕಿ ಹರಿಯುತ್ತಿವೆ.
ನೆರೆಯ ತಮಿಳುನಾಡು, ಕೇರಳ, ರಾಜ್ಯದ ವಿವಿಧ ಮೂಲೆಗಳಿಂದ ಪ್ರವಾಸಿಗರ ದಂಡೇ ಜಲಪಾತ ವೀಕ್ಷಣೆಗೆ ಹರಿದು ಬರುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT