ADVERTISEMENT

ಶಾಸಕಿ ಗೀತಾಮಹದೇವಪ್ರಸಾದ್‌ಗೆ ಅಭಿನಂದನೆ

​ಪ್ರಜಾವಾಣಿ ವಾರ್ತೆ
Published 5 ಮೇ 2017, 8:30 IST
Last Updated 5 ಮೇ 2017, 8:30 IST

ಗುಂಡ್ಲುಪೇಟೆ: ತಾಲ್ಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆಯನ್ನು ರಾಜ್ಯದಲ್ಲೇ ಮಾದರಿ ಕೃಷಿ ಉತ್ಪನ್ನ ಮಾರುಕಟ್ಟೆಯಾಗಿ ಮಾಡುವ ಕನಸು ಕಂಡಿದ್ದ ಎಚ್.ಎಸ್. ಮಹದೇವಪ್ರಸಾದ್‌ ಅವರ ಕನಸನ್ನು ನನ್ನ ಆಡಳಿತ ಅವಧಿಯಲ್ಲಿ ನನಸು ಮಾಡುತ್ತೇನೆ ಎಂದು ಶಾಸಕಿ ಗೀತಾ ಮಹದೇವ ಪ್ರಸಾದ್ ತಿಳಿಸಿದರು.

ತಾಲೂಕಿನ ತೆರಕಣಾಂಬಿ ಹಾಗೂ ಗುಂಡ್ಲುಪೇಟೆ ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ನಡೆಯುತ್ತಿರುವ ಅಭಿವೃದ್ದಿ ಕೆಲಸಗಳ ಕಾಮಗಾರಿಗಳನ್ನು ಪರಿಶೀಲಿಸಿ ಮಾತನಾಡಿದರು.

ಎಚ್.ಎಸ್.ಮಹದೇವಪ್ರಸಾದ್ ಅವರು ತಮ್ಮ ದೂರದೃಷ್ಟಿಯಿಂದ ತಾಲ್ಲೂಕಿನ ರೈತಾಪಿ ವರ್ಗದ ಜನತೆಗೆ ಅನುಕೂಲವಾಗಲೆಂದು ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಕೃಷಿ ಉತ್ಪನ್ನ ಮಾರುಕಟ್ಟೆಯನ್ನು ವ್ಯಾಪಾರ ಸ್ಥರಿಗೆ ಹಾಗೂ ತಾಲ್ಲೂಕಿನ ರೈತ ಸಮುದಾಯಕ್ಕೆ ಅನುಕೂಲವಾಗಲೆಂದು ಸ್ಥಾಪನೆ ಮಾಡಿದ್ದರು ಎಂದರು.

ತಾಲ್ಲೂಕಿನ ಬೇಗೂರು ಗ್ರಾಮದಲ್ಲಿ ಹತ್ತಿ ಮಾರುಕಟ್ಟೆ ತೆರೆಯಲು ಮುಂದಿನ ದಿನದಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ ಅವರು ಪಟ್ಟಣದ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ಹಾಗೂ ತೆರಕಣಾಂಬಿಯ ಉಪಮಾರು ಕಟ್ಟೆ ತರಕಾರಿ ಮಾರುಕಟ್ಟೆ ಪ್ರಾಂಗಣದಲ್ಲಿ ₹ 600 ಲಕ್ಷ ವೆಚ್ಚದಲ್ಲಿ ಕೈಗೊಳ್ಳಬೇಕಾದ ಅಭಿವೃದ್ದಿ ಕಾಮಗಾರಿಗಳನ್ನು ಕೈಗೆತ್ತಿ ಕೊಳ್ಳಲು ಅರ್.ಐ.ಡಿ.ಎಫ್ -22 ಯೋಜ ನೆಯಡಿ ಸಹಾಯಧನ ಮಂಜೂರು ಮಾಡುವಂತೆ ತೋಟಗಾರಿಕೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವರಿಗೆ ಮನವಿ ಪತ್ರ ರವಾನಿಸಿದ್ದೇನೆ ನನ್ನ ಅಧಿಕಾರ ಅವಧಿಯಲ್ಲಿ ಮಂಜೂರು ಮಾಡಿಸಲು ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.

ಕಾಡಾ ಅಧ್ಯಕ್ಷ ಎಚ್.ಎಸ್.ನಂಜಪ್ಪ ಮಾತನಾಡಿ ಕೃಷಿ ಉತ್ಪನ್ನ ಮಾರುಕಟ್ಟೆ ಅಧಿಕಾರಿಗಳು ರೈತರು ಮಾರುಕಟ್ಟೆಗೆ ತರುವ ಬೆಳೆಗಳಿಗೆ ಉತ್ತಮ ಬೆಲೆ ಸಿಗುವಂತೆ ಮಾಡಬೇಕು ಹಾಗೂ ಮಾರುಕಟ್ಟೆಯಲ್ಲಿ ರೈತರಿಗೆ ದಲ್ಲಾಳಿ ಗಳಿಂದ ಅಗುತ್ತಿರುವ ಶೋಷಣೆಗೆ  ಕಡಿವಾಣ ಹಾಕುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸಬೇಕು ಎಂದರು

ಕಾರ್ಯಕ್ರಮದಲ್ಲಿ ಜಿ.ಪಂ ಸದಸ್ಯ ಕೆ.ಎಸ್.ಮಹೇಶ್, ಎಚ್.ಎಸ್.ಎಂ. ಪುತ್ರ ಎಚ್.ಎಂ. ಗಣೇಶ್‌ಪ್ರಸಾದ್ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ ಬಿ.ಕೆ.ಶಿವಪ್ಪ, ಉಪಾಧ್ಯಕ್ಷೆ ನಾಗಮಣಿ, ಸದಸ್ಯರಾದ ಮೃತೃಂಜಯ, ಶಿವನಾಗಪ್ಪ, ಮಡಿವಾಳಪ್ಪ, ಹೊಣಕಾರನಾಯಕ ಮೊದಲಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.