ADVERTISEMENT

ಸಾರ್ವಜನಿಕ ಆಸ್ಪತ್ರೆಗೆ ಸಚಿವೆ ಭೇಟಿ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2017, 6:28 IST
Last Updated 18 ನವೆಂಬರ್ 2017, 6:28 IST

ಗುಂಡ್ಲುಪೇಟೆ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಶುಕ್ರವಾರ ಜಿಲ್ಲಾ ಉಸ್ತವಾರಿ ಸಚಿವೆ ಎಂ.ಸಿ. ಮೋಹನಕುಮಾರಿ ಭೇಟಿ ನೀಡಿ ಪರಿಶೀಲಿಸಿದರು. ಖಾಸಗಿ ಆಸ್ಪತ್ರೆಯ ವೈದ್ಯರು ಮುಷ್ಕರ ನಡೆಸುತ್ತಿದ್ದು, ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆ ಹೆಚ್ಚಳವಾಗಿದೆ. ವೈದ್ಯರು ಎಲ್ಲರಿಗೂ ಚಿಕಿತ್ಸೆ ನೀಡಬೇಕು ಎಂದು ಸೂಚನೆ ನೀಡಿದರು.

ಆಸ್ಪತ್ರೆಯ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ರೋಗಿಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಬಳಿಕ ಹೆರಿಗೆ ವಾರ್ಡ್‌ ಮತ್ತು ಹೊರ ರೋಗಿಗಳ ವಿಭಾಗಕ್ಕೆ ತೆರಳಿದ ಅವರು, ಚಿಕಿತ್ಸೆ ಸರಿಯಾಗಿ ಸಿಗುತ್ತಿದೆಯಾ? ಸಮಯಕ್ಕೆ ಸರಿಯಾಗಿ ವೈದ್ಯರು ಭೇಟಿ ನೀಡುತ್ತಿದ್ದಾರಾ? ಎಂದು ರೋಗಿಗಳನ್ನು ಪ್ರಶ್ನಿಸಿ ಮಾಹಿತಿ ಪಡೆದುಕೊಂಡರು.

‘ವೈದ್ಯರು ರಜೆ ತೆಗೆದುಕೊಳ್ಳದೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹೆಚ್ಚುವರಿ ಅವಧಿ ಸೇವೆ ನೀಡುತ್ತಿದ್ದಾರೆ’ ಎಂದು ಆಸ್ಪತ್ರೆಯ ಮುಖ್ಯ ನಿರ್ವಾಹಕ ಡಾ.ನಾಗಚಾರ್ ತಿಳಿಸಿದರು. ಈ ವೇಳೆ ಪುರಸಭೆ ಅಧ್ಯಕ್ಷ ಪಿ.ಗಿರೀಶ್ ಮತ್ತು ಸದಸ್ಯರು ಹಾಜರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.