ADVERTISEMENT

ಹರವೆ: ಡೆಂಗಿ ಜಾಗೃತಿ ಕಾರ್ಯಕ್ರಮ

ಹರವೆ: ಜನ ಜಾಗೃತಿ ಜಾಥಾಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 30 ಜೂನ್ 2017, 4:10 IST
Last Updated 30 ಜೂನ್ 2017, 4:10 IST

ಚಾಮರಾಜನಗರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಪಂಚಾಯಿತಿ, ಗ್ರಾಮ ಪಂಚಾಯಿತಿಯಿಂದ ಹರವೆ ಗ್ರಾಮದಲ್ಲಿ ಗುರುವಾರ ಡೆಂಗಿ ಜಾಗೃತಿ ಕಾರ್ಯಕ್ರಮ ನಡೆಯಿತು.

ಜನ ಜಾಗೃತಿ ಜಾಥಾಕ್ಕೆ ಜಿಲ್ಲಾ ಪಂಚಾಯಿತಿ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಕೆರೆಹಳ್ಳಿ ನವೀನ್‌ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಡೆಂಗಿ ಸೇರಿದಂತೆ ಇತರೆ ಸಾಂಕ್ರಾಮಿಕ ರೋಗಗಳ ತಡೆಯಲು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ಹೆಚ್ಚು ನಡೆಯಬೇಕು ಎಂದರು.

ADVERTISEMENT

ರೋಗ ನಿಯಂತ್ರಣಕ್ಕೆ ವಹಿಸ ಬೇಕಿ ರುವ ಮುನ್ನೆಚ್ಚರಿಕೆ ಕ್ರಮಗಳು, ಶುಚಿತ್ವ, ಸುತ್ತಮುತ್ತಲ ಪರಿಸರ ನೈರ್ಮಲ್ಯ ಕಾಪಾಡುವಿಕೆಯ ಮಹತ್ವವನ್ನು ತಿಳಿಸಿ ಕೊಡಬೇಕಿದೆ. ಈ ನಿಟ್ಟಿನಲ್ಲಿ ಜನಪ್ರತಿ ನಿಧಿಗಳು ಮತ್ತು ನಾಗರಿಕರ ಸಹಭಾಗಿತ್ವ ಅಗತ್ಯವಾಗಿದೆ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಚ್. ಪ್ರಸಾದ್ ಮಾತನಾಡಿ, ಯಾವುದೇ ಜ್ವರ ಬಂದರೂ ತಕ್ಷಣವೇ ಹತ್ತಿರದ ಆಸ್ಪತ್ರೆಗೆ ತೆರಳಿ ಆರೋಗ್ಯ ತಪಾಸಣೆ ಮಾಡಿಸಿ ಕೊಳ್ಳಬೇಕು. ಮನೆಯ ಸುತ್ತಲ ಪರಿಸರ ಸ್ವಚ್ಛತೆ ಕಾಪಾಡಿಕೊಂಡು ಸೊಳ್ಳೆಗಳ ನಿಯಂತ್ರಣ ಮಾಡಬೇಕು. ವೈಯಕ್ತಿಕ ಶುಚಿತ್ವದ ಬಗ್ಗೆಯೂ ಹೆಚ್ಚು ಗಮನ ಕೊಡಬೇಕು ಎಂದರು.

ಯಾವುದೇ ಆರೋಗ್ಯ ಸಮಸ್ಯೆ ಗಳಿರಲಿ ಆರೋಗ್ಯ ಇಲಾಖೆ ಸ್ಪಂದಿಸಿ ಪರಿಹರಿಸುವ ಯತ್ನ ಮಾಡುತ್ತಿದೆ. ಜ್ವರ ಸಂಬಂಧಿ ಪ್ರಕರಣಗಳನ್ನು ಗಂಭೀರ ವಾಗಿ ಪರಿಗಣಿಸಿ ಚಿಕಿತ್ಸೆ ನೀಡುತ್ತಿದೆ ಎಂದು ತಿಳಿಸಿದರು.

ತಾ.ಪಂ ಸದಸ್ಯ ರೇವಣ್ಣ, ಗ್ರಾ.ಪಂ ಅಧ್ಯಕ್ಷೆ ಪುಟ್ಟಮ್ಮ, ಉಪಾಧ್ಯಕ್ಷೆ ಜಯ ಶೀಲ, ಸದಸ್ಯರಾದ ಮಹದೇವಸ್ವಾಮಿ, ನಂಜುಂಡಸ್ವಾಮಿ, ಸುಬ್ಬಶೆಟ್ಟಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಎಂ. ನಾಗ ರಾಜು, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಎಚ್.ಎನ್. ಮೋಹನ್‌ಕುಮಾರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.