ADVERTISEMENT

ಹೆಚ್ಚುವರಿ ಸೆಕ್ಟರ್ ಮ್ಯಾಜಿಸ್ಟ್ರೇಟರ್‌ ನೇಮಕ

ಚಿಕ್ಕಲ್ಲೂರು ಜಾತ್ರೆ: ಕಾನೂನು–ಸುವ್ಯವಸ್ಥೆ ಪಾಲನೆಗೆ ಒತ್ತು

​ಪ್ರಜಾವಾಣಿ ವಾರ್ತೆ
Published 13 ಜನವರಿ 2017, 7:12 IST
Last Updated 13 ಜನವರಿ 2017, 7:12 IST
ಚಾಮರಾಜನಗರ: ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಲ್ಲೂರು ಗ್ರಾಮದಲ್ಲಿ ಜ. 16ರವರೆಗೆ ಸಿದ್ದಪ್ಪಾಜಿ ಜಾತ್ರಾ ಮಹೋತ್ಸವ ನಡೆಯಲಿದೆ. ಕಾನೂನು, ಸುವ್ಯವಸ್ಥೆ ಸಂಬಂಧ ಹೆಚ್ಚುವರಿ ಸೆಕ್ಟರ್ ಮ್ಯಾಜಿಸ್ಟ್ರೇಟರ್‌ಗಳನ್ನು ನಿಯೋಜಿಸಿ ಜಿಲ್ಲಾಧಿಕಾರಿ ಬಿ. ರಾಮು ಆದೇಶ ಹೊರಡಿಸಿದ್ದಾರೆ. 
 
ಪ್ರಾಣಿಬಲಿ ನೀಡುವುದು, ಮಾರಕಾಸ್ತ್ರ ತರುವುದನ್ನು ತಡೆಗಟ್ಟಲು ಮತ್ತು ಹೈಕೋರ್ಟ್‌ ನಿರ್ದೇಶನದಂತೆ ಪ್ರಾಣಿಬಲಿ ನಿಷೇಧದ ಬಗ್ಗೆ ಸಾರ್ವಜನಿಕರಿಗೆ ತಿಳಿವಳಿಕೆ ನೀಡಿ ಕ್ರಮ ಕೈಗೊಳ್ಳುವ ಸಮಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದಂತೆ ತಕ್ಷಣ ಆದೇಶ ಮಾಡಲು ಈ ಕ್ರಮಕೈಗೊಳ್ಳಲಾಗಿದೆ.
 
ಕೊಳ್ಳೇಗಾಲ ಉಪ ವಿಭಾಗಾ ಧಿಕಾರಿ, ತಹಶೀಲ್ದಾರ್ ಅವರೊಂದಿಗೆ ಹೆಚ್ಚುವರಿಯಾಗಿ ಕರ್ತವ್ಯ ನಿರ್ವಹಿಸಲು ಹೆಚ್ಚುವರಿ ಸೆಕ್ಟರ್ ಮ್ಯಾಜಿಸ್ಟ್ರೇಟರ್‌ ಗಳಾಗಿ ಅಧಿಕಾರಿಗಳ ನೇಮಕ ಮಾಡಲಾಗಿದೆ.
 
ಬೆಳಿಗ್ಗೆ 8ರಿಂದ ಮಧ್ಯಾಹ್ನ 2ಗಂಟೆವರೆಗೆ ಮೊದಲನೇ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲು ಚಿಕ್ಕಲ್ಲೂರು ಹೊಸಮಠದ ತೆರೆದ ಸುತ್ತಮುತ್ತಲಿನ ಪ್ರದೇಶಕ್ಕೆ ಕೊಳ್ಳೇಗಾಲದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವರನ್ನು ನೇಮಿಸ ಲಾಗಿದೆ. ಚಿಕ್ಕಲ್ಲೂರು ಹಳೆ ಮಠದ ಸುತ್ತಮುತ್ತಲಿನ ಪ್ರದೇಶಕ್ಕೆ ಕೊಳ್ಳೇಗಾಲದ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವರನ್ನು ನಿಯೋಜಿಸಲಾಗಿದೆ.
 
ಸಿದ್ದಪ್ಪಾಜಿ ದೇವಸ್ಥಾನದ ಸುತ್ತ ಮುತ್ತಲಿನ ಪ್ರದೇಶಕ್ಕೆ ಕೊಳ್ಳೇಗಾಲದ ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಎಂಜಿನಿಯರ್ ಅವರನ್ನು ನೇಮಿಸಲಾಗಿದೆ. ಕೊತ್ತ ನೂರು, ಬಾಣೂರು, ಸುಂಡಳ್ಳಿ ಗ್ರಾಮದ ಸುತ್ತಮುತ್ತಲಿನ ಪ್ರದೇಶಕ್ಕೆ ಕೊಳ್ಳೇಗಾಲದ ತಾ.ಪಂ ಕಾರ್ಯ ನಿರ್ವಹಣಾಧಿಕಾರಿ ಅವರನ್ನು ನಿಯೋಜಿಸಲಾಗಿದೆ.
ರಾಚಪ್ಪಾಜಿ ನಗರದ ಸುತ್ತಮುತ್ತಲಿನ ಪ್ರದೇಶಕ್ಕೆ ಕೊಳ್ಳೇಗಾಲ ನಗರಸಭೆ ಪೌರಾಯುಕ್ತರು ಹಾಗೂ ಬಂಡಳ್ಳಿ ರಸ್ತೆ ಮಾರ್ಗದ ಸುತ್ತಮುತ್ತಲಿನ ಪ್ರದೇಶದ ವ್ಯಾಪ್ತಿಗೆ ಕೊಳ್ಳೇಗಾಲ ತಾಲ್ಲೂಕು ಪಶು ಸಂಗೋಪನಾ ಸಹಾಯಕ ನಿರ್ದೇಶಕರನ್ನು ನೇಮಿಸಲಾಗಿದೆ. 
 
ಮಧ್ಯಾಹ್ನ 2ರಿಂದ ರಾತ್ರಿ 10ಗಂಟೆವರೆಗೆ ಎರಡನೇ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲು ಚಿಕ್ಕಲ್ಲೂರು ಹೊಸ ಮಠದ ತೆರೆದ ಸುತ್ತಮುತ್ತಲಿನ ಪ್ರದೇಶಕ್ಕೆ ಕೊಳ್ಳೇಗಾಲದ ಕಾವೇರಿ ನೀರಾವರಿ ನಿಗಮದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವರನ್ನು ನಿಯೋಜಿಸ ಲಾಗಿದೆ. ಚಿಕ್ಕಲ್ಲೂರು ಹಳೆ ಮಠದ ಸುತ್ತಮುತ್ತಲಿನ ಪ್ರದೇಶಕ್ಕೆ ಚಾಮರಾಜ ನಗರದ ತೂಕ ಮತ್ತು ಅಳತೆ ಇಲಾಖೆಯ ಸಹಾಯಕ ನಿಯಂತ್ರಕರನ್ನು ನಿಯೋಜಿಸಲಾಗಿದೆ.
 
ಸಿದ್ದಪ್ಪಾಜಿ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶಕ್ಕೆ ಚಾಮರಾಜ ನಗರದ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ನಿಯೋಜನೆ ಗೊಂಡಿದ್ದಾರೆ. ಕೊತ್ತನೂರು, ಬಾಣೂರು, ಸುಂಡಳ್ಳಿಯ ಸುತ್ತಮುತ್ತ ಲಿನ ಪ್ರದೇಶಕ್ಕೆ ಜಿಲ್ಲಾ ಪಶು ಸಂಗೋಪನೆ ಮತ್ತು ಪಶುಪಾಲನೆ ಇಲಾಖೆಯ ಉಪ ನಿರ್ದೇಶಕರನ್ನು ನೇಮಿಸಲಾಗಿದೆ.
 
ರಾಚಪ್ಪಾಜಿ ನಗರದ ಸುತ್ತಮುತ್ತಲಿನ ಪ್ರದೇಶಕ್ಕೆ ಚಾಮರಾಜನಗರ ಖಾದಿ ಮತ್ತು ಗ್ರಾಮೋದ್ಯೋಗ ಇಲಾಖೆಯ ಉಪನಿರ್ದೇಶಕರು ಮತ್ತು ಬಂಡಳ್ಳಿ ರಸ್ತೆ ಮಾರ್ಗದ ಸುತ್ತಮುತ್ತಲಿನ ಪ್ರದೇಶದ ವ್ಯಾಪ್ತಿಗೆ ಚಾಮರಾಜನಗರದ ಸ್ಥಳೀಯ ಲೆಕ್ಕ ಪರಿಶೀಲನಾ ವರ್ತುಲದ ಹಿರಿಯ ಉಪ ನಿರ್ದೇಶಕರನ್ನು ನೇಮಿಸಲಾಗಿದೆ. 
 
ರಾತ್ರಿ 10ರಿಂದ ಬೆಳಿಗ್ಗೆ 8ಗಂಟೆವರೆಗೆ ಮೂರನೇ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲು ಚಿಕ್ಕಲ್ಲೂರು ಹೊಸ ಮಠದ ತೆರೆದ ಸುತ್ತಮುತ್ತಲಿನ ಪ್ರದೇಶಕ್ಕೆ ಚಾಮರಾಜನಗರದ ಪಂಚಾಯತ್‌ ರಾಜ್ ಎಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿ ಯರ್ ಅವರನ್ನು ನೇಮಿಸಲಾಗಿದೆ. ಚಿಕ್ಕಲ್ಲೂರು ಹಳೆ ಮಠದ ಸುತ್ತಮುತ್ತಲಿನ ಪ್ರದೇಶಕ್ಕೆ ಚಾಮರಾಜನಗರದ ಲೋಕೋಪಯೋಗಿ ಇಲಾಖೆಯ 1ನೇ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವರನ್ನು ನಿಯೋಜಿಸಲಾಗಿದೆ.
 
ಸಿದ್ದಪ್ಪಾಜಿ ದೇವಸ್ಥಾನದ ಸುತ್ತ ಮುತ್ತಲಿನ ಪ್ರದೇಶಕ್ಕೆ ಕೊಳ್ಳೇಗಾಲ ತಾಲ್ಲೂಕಿನ ಕಾಮಗೆರೆಯ ಕಾವೇರಿ ನೀರಾವರಿ ನಿಗಮದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವರನ್ನು ನೇಮಿಸಲಾಗಿದೆ. ಕೊತ್ತ ನೂರು, ಬಾಣೂರು, ಸುಂಡಳ್ಳಿ ಗ್ರಾಮದ ಸುತ್ತಮುತ್ತಲಿನ ಪ್ರದೇಶಕ್ಕೆ ಕೊಳ್ಳೇಗಾಲ ತಾಲ್ಲೂಕು ಉಡುತೊರೆಹಳ್ಳ ಕಾವೇರಿ ನೀರಾವರಿ ನಿಗಮದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವರನ್ನು ನೇಮಿಸಲಾಗಿದೆ.
 
ರಾಚಪ್ಪಾಜಿ ನಗರದ ಸುತ್ತಮುತ್ತಲಿನ ಪ್ರದೇಶಕ್ಕೆ ಕೊಳ್ಳೇಗಾಲ ತಾಲ್ಲೂಕಿನ ಅಜ್ಜೀಪುರ ಕಾವೇರಿ ನೀರಾವರಿ ನಿಗಮದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಹಾಗೂ ಬಂಡಳ್ಳಿ ರಸ್ತೆ ಮಾರ್ಗದ ಸುತ್ತಮುತ್ತಲಿನ ಪ್ರದೇಶದ ವ್ಯಾಪ್ತಿಗೆ ಕೊಳ್ಳೇಗಾಲ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾ ಯಕ ನಿರ್ದೇಶಕರನ್ನು ನೇಮಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.