ADVERTISEMENT

1.89 ಕೋಟಿ ಕಾಮಗಾರಿಗೆ ಚಾಲನೆ

ಅಂಬೇಡ್ಕರ್ ಭವನದ ಮುಂದುವರಿದ ಕಾಮಗಾರಿ; ಸಂಸದರಿಂದ ಭೂಮಿಪೂಜೆ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2017, 7:01 IST
Last Updated 7 ಮಾರ್ಚ್ 2017, 7:01 IST
ಚಾಮರಾಜನಗರ: ನಗರದ ಕರಿನಂಜನ ಪುರ ರಸ್ತೆಯಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಭವನದ ಮುಂದುವರಿದ ಕಾಮಗಾರಿಗೆ ಸಂಸದ ಆರ್. ಧ್ರುವನಾರಾಯಣ ಸೋಮವಾರ ಭೂಮಿಪೂಜೆ ನೆರವೇರಿಸಿದರು. 
 
ಬಳಿಕ ಮಾತನಾಡಿದ ಅವರು, ₹ 1.89 ಕೋಟಿ ವೆಚ್ಚದಡಿ ಮುಂದುವರಿದ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು. ‘ರಾಜ್ಯ ಸರ್ಕಾರ ಎಸ್ಇಪಿ, ಟಿಎಸ್‌ಪಿ ಯೋಜನೆಗೆ ಅತಿಹೆಚ್ಚು ಹಣ ಮೀಸಲಿ ಟ್ಟಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ಧಿ ಕಾರ್ಯಕ್ರಮಕ್ಕೆ ಹೆಚ್ಚು ಹಣ  ವಿನಿಯೋಗಿಸಲಾಗುತ್ತಿದೆ’ ಎಂದು ತಿಳಿಸಿದರು.
 
ವಿಶೇಷ ಹೆಚ್ಚುವರಿ ಅನುದಾನದ ಪರಿಣಾಮ ಅಂಬೇಡ್ಕರ್ ಭವನ ಸೇರಿ ದಂತೆ ಇತರೇ ಭವನಗಳಿಗೂ ಹೆಚ್ಚಿನ ನೆರವು ದೊರೆಯುತ್ತಿದೆ. ತಾಲ್ಲೂಕು, ಹೋಬಳಿ ಕೇಂದ್ರದಲ್ಲೂ ಭವನ ನಿರ್ಮಿ ಸಲು ಸಾಕಷ್ಟು ಅನುದಾನ ಮಂಜೂರು ಮಾಡಲಾಗುತ್ತಿದೆ ಎಂದರು. 
 
ಅಂಬೇಡ್ಕರ್ ಭವನದ ಮುಂದುವರಿದ ಕಾಮಗಾರಿಯಡಿ ಹಲವು ಕೆಲಸ ಪೂರ್ಣಗೊಳಿಸಿ ಸುಸಜ್ಜಿತಗೊಳಿಸಲಾಗುವುದು. ಇದರಿಂದ ಭವನವು ಸರ್ಕಾರಿ ಹಾಗೂ ಖಾಸಗಿ ಕಾರ್ಯಕ್ರಮಗಳಿಗೂ ಅನುಕೂಲವಾಗಲಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಭವನದ ಬಾಡಿಗೆಯಲ್ಲಿ ರಿಯಾಯಿತಿ ನೀಡಲಾಗುತ್ತಿದೆ ಎಂದರು.
 
ಭವನದ ಕಾಮಗಾರಿಯು ಗುಣ ಮಟ್ಟದಿಂದ ಕೂಡಿರಬೇಕು. ನಿಗದಿತ ವೇಳೆಗೆ ಕೆಲಸ ಪೂರ್ಣವಾಗಬೇಕು. ಸುಣ್ಣ ಬಣ್ಣ ಬಳಿಯುವ ಕೆಲಸವೂ ಅಚ್ಚುಕಟ್ಟಾಗಿ ಇರಬೇಕು. ಊಟದ ಹಾಲ್, ಸಭಾಂಗಣ, ಭವನದ ಮುಂದಿನ ಆವರಣ ಸೇರಿದಂತೆ ಎಲ್ಲವೂ ಪರಿಪೂರ್ಣವಾಗಿ ಇರಬೇಕು ಎಂದು ಸೂಚಿಸಿದರು. ಶಾಸಕ ಸಿ. ಪುಟ್ಟರಂಗಶೆಟ್ಟಿ ಮಾತ  ನಾಡಿ, ಸರ್ಕಾರದ ನೆರವಿನಿಂದ ವಿವಿಧೆಡೆ ಭವನಗಳ ನಿರ್ಮಾಣಕ್ಕೆ ಅನುಕೂಲ ವಾಗಿದೆ. ಈ ಭವನಗಳು ಸದ್ಬಳಕೆಯಾಗ ಬೇಕು ಎಂದರು.
 
ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ. ರಾಮಚಂದ್ರ, ನಗರಸಭೆ ಅಧ್ಯಕ್ಷೆ ಎಸ್.ಎನ್.ರೇಣುಕಾ, ಉಪಾಧ್ಯಕ್ಷ ಆರ್.ಎಂ.ರಾಜಪ್ಪ, ತಾಲ್ಲೂಕು ಪಂಚಾ ಯಿತಿ ಅಧ್ಯಕ್ಷ ಎಚ್.ವಿ. ಚಂದ್ರು, ಉಪಾಧ್ಯಕ್ಷ ಪಿ.ಎನ್. ದಯಾನಿಧಿ, ಚೂಡಾ ಅಧ್ಯಕ್ಷ ಸುಹೇಲ್ ಆಲಿಖಾನ್, ನಗರಸಭೆ ಸದಸ್ಯ ಎಸ್. ನಂಜುಂಡ ಸ್ವಾಮಿ, ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಪಿ. ಸದಾಶಿವಮೂರ್ತಿ, ಎಪಿಎಂಸಿ ಅಧ್ಯಕ್ಷ ಬಿ.ಕೆ. ರವಿಕುಮಾರ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೆ.ಎಚ್.ಸತೀಶ್ ಹಾಜರಿದ್ದರು. 
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.