ADVERTISEMENT

25ಕ್ಕೆ ರಾಷ್ಟ್ರೀಯ ಮತದಾರರ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 10 ಜನವರಿ 2017, 10:16 IST
Last Updated 10 ಜನವರಿ 2017, 10:16 IST
ಚಾಮರಾಜನಗರ: ‘ಯುವಜನರಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸಲು ಜ. 25ರಂದು ನಡೆಯುವ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮಕ್ಕೆ ಅಧಿಕಾರಿಗಳು ಅಗತ್ಯ ಸಿದ್ಧತೆಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಬಿ. ರಾಮು ಸೂಚಿಸಿದರು.
 
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರೀಯ ಮತದಾರರ ದಿನ ಆಚರಿ ಸುವ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
 
ಚುನಾವಣಾ ಆಯೋಗದ ನಿರ್ದೇಶನದಂತೆ ಯುವಜನರಲ್ಲಿ ಚುನಾವಣೆ ಕುರಿತು ಅರಿವು ಮೂಡಿಸ ಬೇಕಿದೆ. ಈ ನಿಟ್ಟಿನಲ್ಲಿ ಈ ವರ್ಷವೂ ರಾಷ್ಟ್ರೀಯ ಮತದಾರರ ದಿನ ಆಚರಿಸ ಲಾಗುವುದು. ಚುನಾವಣಾ ಪ್ರಕ್ರಿಯೆ ಯಲ್ಲಿ ಅನುಸರಿಸುವ ಪಾರದರ್ಶಕತೆ, ಇತರೇ ಮಹತ್ವ ಕುರಿತು ಮನವರಿಕೆ ಮಾಡಿಕೊಡಬೇಕಿದೆ ಎಂದರು.
 
ಜನತಂತ್ರ ವ್ಯವಸ್ಥೆ ಬಲಪಡಿಸಲು ಜನರು ಸಕ್ರಿಯವಾಗಿ ತೊಡಗಿಸಿಕೊಳ್ಳ ಬೇಕಿದೆ. ಅರ್ಹ ಮತದಾರರ ಹೆಸರು ಮತದಾರರಪಟ್ಟಿಯಲ್ಲಿ ಇರಬೇಕು ಎಂಬುದು ಚುನಾವಣಾ ಆಯೋಗದ ಸೂಚನೆಯಾಗಿದೆ ಎಂದು ಹೇಳಿದರು.
 
ಜ.25ರಂದು ಪರಿಣಾಮಕಾರಿ ಯಾಗಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಎಲ್ಲ ತಾಲ್ಲೂಕಿನಲ್ಲೂ ಮತದಾರರ ದಿನಾಚರಣೆ ಅಂಗವಾಗಿ ಕಾಲೇಜು ವಿದ್ಯಾರ್ಥಿಗಳಿಗೆ ‘ಯುವ ಮತ್ತು ಭಾವಿ ಮತದಾರರ ಸಬಲೀಕರಣ’ ಎಂಬ ವಿಷಯ ಕುರಿತು ಪ್ರಬಂಧ ಹಾಗೂ ಭಾಷಣ ಸ್ಪರ್ಧೆ ಆಯೋಜಿಸಿ ಜಾಗೃತಿ ಮೂಡಿಸಬೇಕು. ಪ್ರತಿ ಸ್ಪರ್ಧೆಯಲ್ಲಿ ಆಯ್ಕೆಯಾದ ತಲಾ ಮೂವರು ವಿದ್ಯಾರ್ಥಿಗಳನ್ನು ಜಿಲ್ಲಾಮಟ್ಟದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಕಳುಹಿಸ ಬೇಕು ಎಂದು ಸೂಚಿಸಿದರು. 
 
ಜ.20ರೊಳಗೆ ಸ್ಪರ್ಧೆ ಪೂರ್ಣ ಗೊಳಿಸಿ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು, ನಗರದ ಪ್ರಥಮ ದರ್ಜೆ ಸರ್ಕಾರಿ ಕಾಲೇಜು ಪ್ರಾಂಶು ಪಾಲರು ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿ ಸಲ್ಲಿಸಬೇಕು. ಶಾಲಾ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ ಏರ್ಪಡಿಸಬೇಕು. ಅತ್ಯುತ್ತಮ 3 ಚಿತ್ರಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಸಲ್ಲಿಸಬೇಕು ಎಂದರು.
 
ಸ್ಪರ್ಧೆಗಳು ಪಾರದರ್ಶಕವಾಗಿರ ಬೇಕು. ಹೊಸದಾಗಿ ನೋಂದಣಿಯಾದ ಯುವ ಮತದಾರರಿಗೆ ಕಾರ್ಯಕ್ರಮ ದಂದು ಎಪಿಕ್ ಕಾರ್ಡ್‌ (ಮತದಾರರ ಗುರುತಿನ ಚೀಟಿ) ವಿತರಿಸಬೇಕು. ತಾಲ್ಲೂಕುಮಟ್ಟದಲ್ಲಿಯೂ ಪೂರ್ವ ಭಾವಿ ಸಭೆ ನಡೆಸಿ ರಾಷ್ಟ್ರೀಯ ಮತದಾರರ ದಿನವನ್ನು ಯಶಸ್ವಿಯಾಗಿ ಆಚರಿಸಲು ಅಗತ್ಯವಿರುವ ಎಲ್ಲ ಸಿದ್ಧತೆಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
 
ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಫ್ಸಿಬಾ ರಾಣಿ ಕೊರ್ಲಪಾಟಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಹೆಚ್ಚು ಅರಿವು ಮೂಡಿಸುವ ಅಗತ್ಯವಿದೆ. ರಾಷ್ಟ್ರೀಯ ಮತದಾರರ ದಿನದಂದು ಪ್ರತಿ ಹೋಬಳಿ, ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಒಂದು ಗಂಟೆಗಳ ಕಾಲ ಬೈಸಿಕಲ್ ಜಾಥಾ ಏರ್ಪಡಿಸಲು ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.
 
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಿ. ಭಾರತಿ, ಉಪ ವಿಭಾಗಾಧಿಕಾರಿ ನಳಿನಿ ­ಅತುಲ್, ತಹಶೀಲ್ದಾರ್ ಪುರಂದರ ಹಾಜರಿದ್ದರು.
 
**
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರು ಪಾಲ್ಗೊಳ್ಳ ಬೇಕಿದೆ. ಈ ಉದ್ದೇಶದಿಂದ ಬೂತ್‌ ಮಟ್ಟದ ಅಧಿಕಾರಿಗಳ ಮೂಲಕ ಅರ್ಹ ಮತದಾರರ ನೇರ ಸಂಪರ್ಕಕ್ಕಾಗಿ ಮತದಾರರ ದಿನ ಆಚರಿಸಲಾಗುತ್ತಿದೆ
-ಬಿ.ರಾಮು,
ಜಿಲ್ಲಾಧಿಕಾರಿ
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.