ADVERTISEMENT

ಆತ್ಮಹತ್ಯೆ ಮಾಡಿಕೊಳ್ಳದಂತೆ ರೈತರಿಗೆ ಸಲಹೆ

ಮಂಚೇನಹಳ್ಳಿಯಲ್ಲಿ ರೈತ ಜಾಗೃತಿ ಅಭಿಯಾನ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2015, 11:21 IST
Last Updated 3 ಸೆಪ್ಟೆಂಬರ್ 2015, 11:21 IST

ಗೌರಿಬಿದನೂರು: ತಾಲ್ಲೂಕಿನ ಮಂಚೇನಹಳ್ಳಿಯಲ್ಲಿ ಮಂಗಳವಾರ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸಂಘಟನೆ ವತಿಯಿಂದ ರೈತ ಜಾಗೃತಿ ಅಭಿಯಾನ ನಡೆಯಿತು. ರೈತ ಮುಖಂಡ ಎಂ.ಆರ್‌.ಲಕ್ಷ್ಮಿನಾರಾಯಣ ಅವರು ಅಭಿಯಾನಕ್ಕೆ ಚಾಲನೆ ನೀಡಿ ರೈತರ ಸಂಕಷ್ಟದ ಕುರಿತು ಆತಂಕ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ವ್ಯಾಪಿಸಿರುವ ಬರಗಾಲದ ಮಧ್ಯೆಯೂ ಬಹುತೇಕ ರೈತರು ಆತ್ಮವಿಶ್ವಾಶದಿಂದ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಆತ್ಮಹತ್ಯೆ ಅಥವಾ ಪ್ರಾಣಕ್ಕೆ ಅಪಾಯ ಮಾಡಿಕೊಳ್ಳುವಂತಹ ಸ್ಥಿತಿ ತಂದುಕೊಳ್ಳದೇ ಧೈರ್ಯದಿಂದ ಜೀವನ ನಡೆಸಬೇಕು ಎಂದು ಸಲಹೆ ನೀಡಿದರು.          
                      
ನೀರಾವರಿ ತಜ್ಞ ಜಿ.ಎಸ್‌.ಪರಮಶಿವಯ್ಯ ವರದಿಯಾಧಾರಿತ ಶಾಶ್ವತ ನೀರಾವರಿ ಯೋಜನೆ ಅನುಷ್ಠಾನಕ್ಕಾಗಿ ರೈತರು ಸೇರಿದಂತೆ ಜಿಲ್ಲೆಯ ಜನರು ಹೋರಾಟ ನಡೆಸಿದ್ದಾರೆ. ಸರ್ಕಾರ ಇದನ್ನು ಅರಿತಾದರೂ ಯೋಜನೆ ಅನುಷ್ಠಾನಕ್ಕೆ ಮುಂದಾಗಬೇಕು ಎಂದು ತಿಳಿಸಿದರು. ರೈತ ಮುಖಂಡರಾದ ಲೋಕೇಶಗೌಡ, ಮುದ್ದಗಂಗಪ್ಪ, ಎಂ.ಟಿ.ನಂಜುಂಡಪ್ಪ, ರುದ್ರೇಶ್‌, ಗಿಡ್ಡರಾಮಯ್ಯ, ನರಸಿಂಹರೆಡ್ಡಿ, ರಾಜಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.