ADVERTISEMENT

ಎನ್‌ಪಿಎಸ್ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2017, 8:20 IST
Last Updated 30 ಡಿಸೆಂಬರ್ 2017, 8:20 IST

ಚೇಳೂರು: ಚೇಳೂರು ಹೋಬಳಿ ತಾಲ್ಲೂಕು ಕೇಂದ್ರಕ್ಕೆ ಆಗ್ರಹಿಸಿ ಚೇಳೂರು ಹೋಬಳಿಯಲ್ಲಿ ಸ್ವಯಂ ಘೋಷಿತ ಬಂದ್‌ಗೆ ಸಹಕಾರ ನೀಡಿದ ಎಲ್ಲ ಅಂಗಡಿ ವರ್ತಕರಿಗೆ, ಸಾರ್ವಜನಿಕರಿಗೆ ಚೇಳೂರು ತಾಲ್ಲೂಕು ಹೋರಾಟ ಸಮಿತಿ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿಯ ಪ್ರಧಾನ ಕಾರ್ಯದರ್ಶಿ ಪುಲಗಲ್ ಪಿ.ರಾಧಾಕೃಷ್ಣ, ‘ಚೇಳೂರು ಹೋಬಳಿಯಲ್ಲಿ ಅಂಗನವಾಡಿ ಕೇಂದ್ರ, ನಾಡಕಚೇರಿ, ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜುಗಳು ಸೇರಿದಂತೆ ಎಲ್ಲ ಅಂಗಡಿ ಮುಂಗಟ್ಟುಗಳು ಮುಚ್ಚಿ ಸ್ವಯಂ ಘೋಷಿತ ಬಂದ್‌ಗೆ ಕೈ ಜೋಡಿಸಿರುವುದರಿಂದ ಬಂದ್‌ ಯಶಸ್ವಿಯಾಗಿದೆ’ ಎಂದು ಹೇಳಿದರು.

‘ಹೋಬಳಿಗೆ ಸೇರಿದ ಆರು ಗ್ರಾಮ ಪಂಚಾಯಿತಿಗಳಲ್ಲಿ ಬಂದ್‌ಗೆ ಬೆಂಬಲ ನೀಡಿರುವುದು ಚೇಳೂರಿನ ಇತಿಹಾಸದ ಪುಟದಲ್ಲಿ ದಾಖಲಾಗಿದೆ. ಚೇಳೂರು ತಾಲ್ಲೂಕು ಕೇಂದ್ರವನ್ನಾಗಿಸುವ ತನಕ ಪಕ್ಷಾತೀತವಾಗಿ ನಿರಂತರ ಹೋರಾಟಕ್ಕೆ ಎಲ್ಲರೂ ಸಹಕರಿಸಬೇಕು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.