ADVERTISEMENT

ಕಡ್ಡಾಯವಾಗಿ ಶೌಚಾಲಯ ನಿರ್ಮಿಸಿಕೊಳ್ಳಿ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2017, 4:51 IST
Last Updated 19 ನವೆಂಬರ್ 2017, 4:51 IST

ಗೌರಿಬಿದನೂರು: ‘ಗ್ರಾಮೀಣ ಭಾಗದ ಜನರು ಶೌಚಾಲಯ ಕಡ್ಡಾಯವಾಗಿ ನಿರ್ಮಿಸಿಕೊಂಡು ಅದನ್ನು ಬಳಸಿಕೊಂಡರೆ ಮಾತ್ರ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ’ ಎಂದು ಜಿಲ್ಲಾ ಪಂಚಾಯಿತಿ ಲೆಕ್ಕಾಧಿಕಾರಿ ನಾಗೇಶ್ ತಿಳಿಸಿದರು.

ತಾಲ್ಲೂಕು ಗಂಗಸಂದ್ರ ಗ್ರಾಮ ಪಂಚಾಯಿತಿಯಲ್ಲಿ ಈಚೆಗೆ ವಿಶೇಷ ಗ್ರಾಮಸಭೆ ಆಯೋಜಿಸಿ ಗಂಗಸಂದ್ರ ಗ್ರಾಮ ಪಂಚಾಯಿತಿಯನ್ನು ಬಯಲು ಶೌಚ ಮುಕ್ತ ಗ್ರಾಮ ಪಂಚಾಯಿತಿ ಎಂದು ಘೋಷಿಸಿ ಅವರು ಮಾತನಾಡಿದರು.

‘ಗಂಗಸಂದ್ರ ಗ್ರಾಮ ಪಂಚಾಯಿತಿಗೆ ಒಳಪಡುವ ಗ್ರಾಮಗಳಲ್ಲಿ ಶೇ 95.60ರಷ್ಟು ಕುಟುಂಬ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಮಿಕ್ಕುಳಿದ ಶೌಚಾಲಯಗಳು ಕಾಮಗಾರಿ ಹಂತದಲಿದ್ದು ಶೀಘ್ರದಲ್ಲಿ ಪೂರ್ಣಗೊಳ್ಳಲಿದೆ. ಈಗಾಗಲೇ ನಿರ್ಮಿಸಿಕೊಂಡಿರುವ ಶೌಚಾಲಯಗಳನ್ನು ಬಳಸಬೇಕು’ ಎಂದು ಹೇಳಿದರು.

ADVERTISEMENT

ಗ್ರಾಮ ಪಂಚಾಯಿತಿ ಅಧ್ಯಕ್ಷ ಲಕ್ಷ್ಮಿನಾರಾಯಣ ಮಾತನಾಡಿ. ‘ಕಳೆದ ಎರಡ್ಮೂರು ತಿಂಗಳಿನಿಂದ ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆ ಯೋಜನೆ ‘ಸ್ವಚ್ಛ ಭಾರತ ಮಿಷನ್’ ಯೋಜನೆಯಡಿ ಗ್ರಾಮಸ್ಥರಿಗೆ ಶೌಚಾಲಯ ನಿರ್ಮಿಸಿಕೊಳ್ಳುವಂತೆ ಸೂಚಿಸಲಾಗಿದೆ’ ಎಂದು ತಿಳಿಸಿದರು.

‘ಬಯಲು ಶೌಚಾಲಯದಿಂದ ಉಂಟಾಗುವ ದುಷ್ಟ ಪರಿಣಾಮಗಳ ಬಗ್ಗೆ ಅರಿವು ಮೂಡಿಸಲಾಗಿದೆ. ಶೌಚಾಲಯ ನಿರ್ಮಿಸಿಕೊಳ್ಳವ ಫಲಾನುಭವಿಗಳಿಗೆ ಪಂಚಾಯಿತಿಯಿಂದ ಹಣವನ್ನು ತ್ವರಿತ ಬಿಡುಗಡೆಯಿಂದಾಗಿ ಶೌಚಾಲಯಗಳು ನಿರ್ಮಿಸಿಕೊಳ್ಳಲಾಗಿದೆ’ ಎಂದರು.

ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಡಿ. ನರಸಿಂಹಮೂರ್ತಿ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಡಾ.ನಾರಾಯಣಸ್ವಾಮಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ವೆಂಕಟಾಚಲಪತಿ, ಗ್ರಾಮ ಪಂಚಾಯಿತಿ ಸದಸ್ಯರಾದ ಗೌರಮ್ಮ, ಯೋಗಾನಂದ, ವೆಂಕಟೇಶ್, ಶಶಿಕಲಾ, ಜಯಪ್ಪ, ಸುವರ್ಣಮ್ಮ, ಗಂಗಾಧರಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.