ADVERTISEMENT

ಕಲುಷಿತ ರಾಜಕೀಯ ವ್ಯವಸ್ಥೆ: ವಿಷಾದ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2017, 9:12 IST
Last Updated 22 ಆಗಸ್ಟ್ 2017, 9:12 IST
ಬಾಗೇಪಲ್ಲಿ ನೂತನ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಆಯೋಜಿಸಿದ್ದ ಡಿ.ದೇವರಾಜು ಅರಸು ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಉದ್ಘಾಟಿಸಿದರು
ಬಾಗೇಪಲ್ಲಿ ನೂತನ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಆಯೋಜಿಸಿದ್ದ ಡಿ.ದೇವರಾಜು ಅರಸು ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಉದ್ಘಾಟಿಸಿದರು   

ಬಾಗೇಪಲ್ಲಿ: ರಾಜಕೀಯದಲ್ಲಿ ಮೌಲ್ಯಗಳ ಕುಸಿತದಿಂದ ನಾಡಿನ ಅಭಿವೃದ್ಧಿ, ಜನರ ಹಿತಾಸಕ್ತಿ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ರಾಜಕೀಯ ವ್ಯವಸ್ಥೆಯ ಸುಧಾರಣೆ ತುರ್ತು ಅಗತ್ಯವಾಗಿದೆ ಎಂದು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಹೇಳಿದರು.

ಪಟ್ಟಣದ 3ನೇ ವಾರ್ಡ್‌ ನಲ್ಲಿರುವ ನೂತನ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಆಯೋಜಿಸಿದ್ದ ಡಿ.ದೇವರಾಜು ಅರಸು ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಸರ್ಕಾರ ನಮಗೇನು ಮಾಡಿದೆ, ಶಾಸಕರು ಏನು ಮಾಡಿದ್ದಾರೆ ಎಂದು ಕೇಳುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಎಲ್ಲ ವರ್ಗಗಳನ್ನೂ ಗಮನದಲ್ಲಿ ಇಟ್ಟುಕೊಂಡು ವಿವಿಧ ರೀತಿಯ ಯೋಜನೆಗಳ ಮೂಲಕ ಅಭಿವೃದ್ಧಿಗೆ ಒತ್ತು ನೀಡಿದೆ. ಯೋಜನೆಗಳ ಸಮರ್ಪಕ ಬಳಕೆ ಮಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ADVERTISEMENT

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತಾರಣಾಧಿಕಾರಿ ಆರ್.ಶಿವಪ್ಪ ಮಾತನಾಡಿದರು. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಜಿಲ್ಲಾ ಪಂಚಾಯಿತಿ ಸದಸ್ಯ ಲಕ್ಷ್ಮೀ ನರಸಿಂಹಪ್ಪ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಆರ್. ನರೇಂದ್ರಬಾಬು, ಉಪಾಧ್ಯಕ್ಷೆ ಸರಸ್ವತಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ವಿ. ಮಂಜುನಾಥ್, ಪುರಸಭೆಯ ಅಧ್ಯಕ್ಷೆ ಮಮತಾ ನಾಗಾರಾಜರೆಡ್ಡಿ, ಉಪಾಧ್ಯಕ್ಷೆ ಹುಸೇನ್‌ ಬಿ, ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಎಚ್.ಎಸ್. ನರೇಂದ್ರ, ಪುರಸಭೆ ಸದಸ್ಯರಾದ ಚನ್ನಮ್ಮ, ವೇಣುಗೋಪಾಲ್, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಕೆ.ಆರ್. ಸುಧಾಕರರೆಡ್ಡಿ, ಶ್ರೀರಾಮನಾಯಕ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್. ಹನುಮಂತರೆಡ್ಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವೆಂಕಟರವಣಪ್ಪ, ದೈಹಿಕ ಶಿಕ್ಷಣ ಪರಿವೀಕ್ಷಕ ವಿ. ಜಯರಾಮ್, ಪ್ರಾಂಶುಪಾಲ ಡಾ. ಕೆ. ನಯಾಜ್ ಅಹಮ್ಮದ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.