ADVERTISEMENT

ಗುಣಮಟ್ಟದ ಔಷಧ ಅಗ್ಗದ ಬೆಲೆಗೆ ಮಾರಾಟ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2017, 10:02 IST
Last Updated 4 ಏಪ್ರಿಲ್ 2017, 10:02 IST

ಬಾಗೇಪಲ್ಲಿ: ಬಡವರಿಗೆ ಕೈಗೆಟುಕುವ ಬೆಲೆಯಲ್ಲಿ ಅತ್ಯಂತ ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ 600ಕ್ಕೂ ವಿವಿಧ ಬಗೆಯ ಔಷಧಿಗಳನ್ನು ಜನರಿಕ್‌ ಔಷಧಿ ಮಳಿಗೆಗಳನ್ನು ಮಾರಾಟ ಮಾಡಲಾಗುತ್ತಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸತ್ಯನಾರಾಯಣರೆಡ್ಡಿ ತಿಳಿಸಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಉತ್ತಮ ಗುಣಮಟ್ಟದ ಜನರಿಕ್ ಔಷಧಿಗಳನ್ನು ಮಾರುಕಟ್ಟೆ ದರಕ್ಕಿಂತಲ್ಲೂ ಶೇ 50 ರಿಂದ 80 ರಷ್ಟು ಕಡಿಮೆ ದರದಲ್ಲಿ ಮಾರಾಟ ಮಾಡುವ ವ್ಯವಸ್ಥೆ ಮಾಡಲಾಗಿದೆ ಎಂದರು. ಶಾಸಕ ಎಸ್.ಎನ್.ಸುಬ್ಬಾರೆಡ್ಡಿ, ಡಾ.ರವಿಶಂಕರ್, ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಜ್ಞಾನಕುಮಾರ್, ನೋಡಲ್ ಅಧಿಕಾರಿ ಚಂದ್ರಮೋಹನ್, ಮುಖ್ಯಾಧಿಕಾರಿ ಜಿ.ಎನ್.ಚಲಪತಿ, ತಾ.ಪಂ.ಅಧ್ಯಕ್ಷ ಕೆ.ಆರ್.ನರೇಂದ್ರಬಾಬು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT