ADVERTISEMENT

ಜೂ.1ಕ್ಕೆ ರ್‍್ಯಾಲಿ: ಮನೆಗೊಬ್ಬರು ಭಾಗವಹಿಸಿ

​ಪ್ರಜಾವಾಣಿ ವಾರ್ತೆ
Published 27 ಮೇ 2017, 5:07 IST
Last Updated 27 ಮೇ 2017, 5:07 IST

ಬಾಗೇಪಲ್ಲಿ: ‘ಶಾಶ್ವತ ಕುಡಿಯುವ ನೀರು ಒದಗಿಸಲು ಸರ್ಕಾರದ ಮೇಲೆ ಒತ್ತಡ ತರಲು ಜೂ.1ಕ್ಕೆ ವಿಧಾನಸೌಧ ಮುತ್ತಿಗೆ ಹಾಕಲಾಗುವುದು. ತಾಲ್ಲೂಕಿನ ಮನೆಗೊಬ್ಬರು ಬೈಕ್‌ ರ್‍್ಯಾಲಿಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು’ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಲಕ್ಷ್ಮಣರೆಡ್ಡಿ ಹೇಳಿದರು.

‘ಕೃಷಿ ಆಧಾರಿತ ಶಾಶ್ವತ ನೀರಾವರಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಎರಡು ದಶಕಗಳಿಂದಲೂ ಈ ಭಾಗದ ಜನರ ನಿರಂತರ ಹೋರಾಟಗಳನ್ನು ಮಾಡಿಕೊಂಡು ಬರುತ್ತಿದ್ದರೂ ಸರ್ಕಾರ ಮೌನವಹಿಸಿರುವುದು ನೋವಿನ ಸಂಗತಿ’ ಎಂದು ಪತ್ರಿಕಾಗೋಷ್ಠಿಯಲ್ಲಿ ದೂರಿದರು.

‘ಚುನಾವಣೆಗಳ ಸಮಯದಲ್ಲಿ ಜನಪ್ರತಿನಿಧಿಗಳು ಸುಳ್ಳು ಭರವಸೆಗಳನ್ನು ಮಾತನಾಡುವುದು ಬಿಟ್ಟರೆ ಸಾಧಿಸಿದ್ದು ಏನು ಇಲ್ಲ’ ಎಂದು ಜನಪ್ರತಿನಿಧಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

ಸರ್ಕಾರದ ರೈತವಿರೋಧಿ ನೀತಿಗಳನ್ನು ಖಂಡಿಸಿ ಬೈಕ್‌ರ್‍್ಯಾಲಿಯಲ್ಲಿ ರೈತರು, ನಾಗರಿಕರು, ವಿದ್ಯಾರ್ಥಿಗಳು, ಸಂಘ ಸಂಸ್ಥೆ ಸದಸ್ಯರು ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕು’ ಎಂದು ಕೋರಿದರು.

ಟಿಪ್ಪುಸುಲ್ತಾ ಸೇವಾ ಟ್ರಸ್ಟ್ ತಾಲ್ಲೂಕು ಕಾರ್ಯದರ್ಶಿ ಮನ್ಸೂರ್, ಬಹುಜನ ಸಮಾಜ ಪಕ್ಷದ ತಾಲ್ಲೂಕು ಅಧ್ಯಕ್ಷ ಎಸ್.ಎನ್.ನರಸಿಂಹಪ್ಪ, ಶಾಶ್ವತ ನೀರಾವರಿ ಹೋರಾಟ ಸಮಿತಿ ತಾಲ್ಲೂಕು ಅಧ್ಯಕ್ಷ ಚಲಪತಿ, ವೆಂಕಟೇಶ್, ಬಿ.ಟಿ.ಶ್ರೀನಿವಾಸರೆಡ್ಡಿ,  ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.