ADVERTISEMENT

ಜ.15ಕ್ಕೆ ಸಿದ್ದರಾಮೇಶ್ವರ ಜಯಂತಿ ಆಚರಣೆ

​ಪ್ರಜಾವಾಣಿ ವಾರ್ತೆ
Published 9 ಜನವರಿ 2017, 10:06 IST
Last Updated 9 ಜನವರಿ 2017, 10:06 IST

ಬಾಗೇಪಲ್ಲಿ: ‘ಚುನಾವಣೆ ನೀತಿ ಸಂಹಿತೆ  ಮತ್ತು ಬರಗಾಲ ಇರುವುದರಿಂದ ಸಿದ್ದರಾಮೇಶ್ವರ ಜಯಂತಿಯನ್ನು ಸರಳವಾಗಿ ಆಚರಣೆ ಮಾಡ ಬೇಕಾಗಿದೆ’ ಎಂದು ತಹಶೀಲ್ದಾರ್ ಶೂಲಾದಯ್ಯ ತಿಳಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಆಶ್ರಯದಲ್ಲಿ ಈಚೆಗೆ ಆಯೋಜಿಸಿದ್ದ ಪೂರ್ವಬಾವಿ ಸಭೆಯಲ್ಲಿ   ಅವರು ಮಾತನಾಡಿದರು.

‘ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಷಣ ಮಾಡುವಂತಿಲ್ಲ, ಎಸ್ಸೆಸ್ಸೆಲ್ಸಿ  ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು’ ಎಂದು ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಆರ್.ನರೇಂದ್ರಬಾಬು ಮಾತನಾಡಿ, ‘ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರು ಸರ್ಕಾರದ ಮೇಲೆ ಒತ್ತಡ ತಂದು ಸಾಯಿ ಬಾಬಾ ಮಂದಿರದ ಬಳಿ ಸಿದ್ದರಾಮೇಶ್ವರ ಭವನವನ್ನು  ನಿರ್ಮಾಣ ಮಾಡಲು ₹ 1.50 ಕೋಟಿ ಅನುದಾನವನ್ನು ಮಂಜೂರು ಮಾಡಿಸಿದ್ದಾರೆ’ ಎಂದು ತಿಳಿಸಿದರು.

ಶಿಶು ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಅರ್.ಸತ್ಯನಾರಾಯಣ್, ಸಮಾಜ ಕಲ್ಯಾಣ ಇಲಾಖೆಯ ನಾಗರತ್ನಮ್ಮ, ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್‌ ನಾರಾಯಣರೆಡ್ಡಿ, ಗ್ರೇಡ್-2 ತಹಶೀಲ್ದಾರ್ ನಾಗರಾಜ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ವಿ.ಕೃಷ್ಣಪ್ಪ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಅಶ್ವಥ್ಥಪ್ಪ, ದೇವರಗುಡಿಪಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಜಿ.ಕಿರಣ್ ಕುಮಾರ್, ನಲ್ಲಪರೆಡ್ಡಿಪಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನಾಗರಾಜ್ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.