ADVERTISEMENT

ನಗರದಲ್ಲಿ ಸ್ವಚ್ಛತೆ ಕಾಪಾಡಲು ಶಾಸಕ ಮನವಿ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2016, 11:03 IST
Last Updated 28 ಸೆಪ್ಟೆಂಬರ್ 2016, 11:03 IST

ಶಿಡ್ಲಘಟ್ಟ: ಪುರಸಭೆಯಿಂದ ನಗರಸಭೆಯಾಗಿ ಮೇಲ್ದರ್ಜೆಗೆ ಏರಿರುವುದರಿಂದ ನಗರದ ಅಂದ ಹೆಚ್ಚಿಲು ಚರಂಡಿ ಹಾಗೂ ರಸ್ತೆಗಳ ಸ್ವಚ್ಛತೆಗೆ ಆದ್ಯತೆ ನೀಡುವ ಮೂಲಕ ಸುಂದರ ನಗರ ರೂಪಿಸಬೇಕು’ ಎಂದು ನೂತನ ನಗರ ಸಭೆ ಆಡಳಿತ ಮಂಡಳಿಗೆ ಶಾಸಕ ಎಂ.ರಾಜಣ್ಣ ಸೂಚಿಸಿದರು.

ನಗರದ ಕೆಎಸ್ಆರ್‌ಟಿಸಿ ಬಸ್‌ ನಿಲ್ದಾಣದ ಸಮೀಪ ಮಂಗಳವಾರ    ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಸ್ವಚ್ಛಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.
‘ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ನಾಗರಿಕರು ಸೇರಿ ನೈರ್ಮಲ್ಯ ಕಾಪಾಡಲು ಶ್ರಮಿಸಿದಾಗ ಮಾತ್ರ ನಗರ ಸುಂದರವಾಗಿ ಕಾಣಲು ಸಾಧ್ಯ’ ಎಂದರು.
ನಗರಸಭೆ ಅಧ್ಯಕ್ಷ ಅಫ್ಸರ್್ ಪಾಷ ಮಾತನಾಡಿ, ‘ನಗರ ಸಭೆಯ ಮೊದಲು ಸ್ವಚ್ಛತೆಗೆ ಆದ್ಯತೆ ಕೊಡಲು ತೀರ್ಮಾನಿಸಲಾಗಿದೆ’ ಎಂದರು.

ಸ್ವಚ್ಚತೆ ಕಾರ್ಯದಲ್ಲಿ ಪೌರ ಕಾರ್ಮಿಕರು, ನಗರಸಭೆ ಸಿಬ್ಬಂದಿ ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು.

ಕೋಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ, ನಗರಸಭೆ ಉಪಾದ್ಯಕ್ಷೆ ಪ್ರಭಾವತಿಸುರೇಶ್, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ನಂದ ಕಿಷನ್, ವೆಂಕಟಸ್ವಾಮಿ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.