ADVERTISEMENT

ಪ್ರಗತಿಗೆ ಯುವಕರ ಪಾತ್ರ ಅಮೂಲ್ಯ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2018, 6:41 IST
Last Updated 12 ಏಪ್ರಿಲ್ 2018, 6:41 IST

ಗೌರಿಬಿದನೂರು: ‘ಪಕ್ಷದ ತತ್ವ ಮತ್ತು ಸಿದ್ದಾಂತಗಳನ್ನು ಮೆಚ್ಚಿ ಹಾಗೂ ಕುಮಾರಣ್ಣನ ನೇತೃತ್ವದ ಪ್ರಾಮಾಣಿಕವಾದ ಜನಪರ ಆಡಳಿತವನ್ನು ಕಾಣುವ ಉದ್ದೇಶದಿಂದ ತಾಲ್ಲೂಕಿನ ಯುವಕರು ಸ್ವಪ್ರೇರಣೆಯಿಂದ ಜೆಡಿಎಸ್ ಪಕ್ಷವನ್ನು ಸೇರುತ್ತಿರುವುದು ನಮಗೆ ಮತ್ತಷ್ಟು ಶಕ್ತಿ ತುಂಬಿದೆ’ ಎಂದು ಜೆಡಿಎಸ್ ಪಕ್ಷದ ಅಭ್ಯರ್ಥಿ ಸಿ.ಆರ್.ನರಸಿಂಹಮೂರ್ತಿ ಹೇಳಿದರು.

ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ‘ದೇಶದ ಭವಿಷ್ಯವನ್ನು ನಿರ್ಧರಿಸಬೇಕಾದರೆ ಯುವಕರ ಪಾತ್ರ ಪ್ರಮುಖವಾಗಿದೆ. ಯುವ ಮತದಾರರು ಸ್ವಪ್ರೇರಣೆಯಿಂದ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಸೇರ್ಪಡೆಯಾಗುವ ಮೂಲಕ ಪಕ್ಷಕ್ಕೆ ಬಲ ನೀಡಿ ದೇಶದ ಪ್ರಗತಿಗೆ ಕೈ ಜೋಡಿಸುತ್ತಿದ್ದಾರೆ’ ಎಂದು ತಿಳಿಸಿದರು.

ಜೆಡಿಎಸ್ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಆರ್.ಅಶೋಕ್ ಕುಮಾರ್ ಮಾತನಾಡಿ, ‘ತಾಲ್ಲೂಕಿನ ಪ್ರತಿಯೊಂದು ಗ್ರಾಮಗಳಲ್ಲಿಯೂ ಯುವ ಜನತೆ ಕುಮಾರಸ್ವಾಮಿ ನೇತೃತ್ವದಲ್ಲಿ 20 ತಿಂಗಳ ಅಧಿಕಾರ ಅವಧಿಯಲ್ಲಿ ಕಂಡಿರುವ ಅಭಿವೃದ್ದಿ ಕಾರ್ಯಗಳನ್ನು ಮತ್ತೆ ಬಯಸುತ್ತಿದ್ದಾರೆ. ಶೈಕ್ಷಣಿಕ ಮತ್ತು ಆರ್ಥಿಕ ಪ್ರಗತಿಯ ಮೂಲಕ ಪ್ರತಿಯೊಬ್ಬರಿಗೂ ಉದ್ಯೋಗದ ಅವಕಾಶಗಳನ್ನು ಕಲ್ಪಿಸಲು ಮುಂದಾಗಿರುವ ಜೆಡಿಎಸ್ ಅಧಿಕಾರಕ್ಕೆ ತರುವ ಹಂಬಲದಲ್ಲಿದ್ದಾರೆ’ ಎಂದರು.

ADVERTISEMENT

ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಸಿ.ಮಂಜುನಾಥರೆಡ್ಡಿ, ನಗರ ಘಟಕದ ಅಧ್ಯಕ್ಷ ಎಸ್.ಲಕ್ಷ್ಮಿನಾರಾಯಣಶೆಟ್ಟಿ, ನಗರಸಭೆ ಸದಸ್ಯ ಸುಬಾನ್, ಮುಖಂಡರಾದ ಚರಣ್, ಚತ್ರಂಶ್ರೀಧರ್, ಶ್ರೀನಿವಾಸ್, ಚೇತನ್, ಪ್ರಭಾಕರ್, ಹರೀಶ್‍ರೆಡ್ಡಿ, ನಾಗೇಂದ್ರ, ಸ್ಟೆಲ್ಲಾ ಶಿವು, ಪ್ರಸನ್ನಕುಮಾರ್, ಮಹಮದ್ ಬೇಗ್, ಮಂಜುನಾಥ್, ಗೋಪಾಲ್, ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.