ADVERTISEMENT

ಪ್ರತಿ ಸಂಘದಲ್ಲೂ ಬಿಎಂಸಿ ಸ್ಥಾಪನೆಗೆ ಚಿಂತನೆ

​ಪ್ರಜಾವಾಣಿ ವಾರ್ತೆ
Published 17 ಜನವರಿ 2017, 9:10 IST
Last Updated 17 ಜನವರಿ 2017, 9:10 IST
ಪ್ರತಿ ಸಂಘದಲ್ಲೂ ಬಿಎಂಸಿ ಸ್ಥಾಪನೆಗೆ ಚಿಂತನೆ
ಪ್ರತಿ ಸಂಘದಲ್ಲೂ ಬಿಎಂಸಿ ಸ್ಥಾಪನೆಗೆ ಚಿಂತನೆ   

ಚಿಕ್ಕಬಳ್ಳಾಪುರ: ‘ಮುಂದಿನ ದಿನಗಳಲ್ಲಿ ತಾಲ್ಲೂಕಿನಲ್ಲಿರುವ ಎಲ್ಲಾ ಹಾಲು ಉತ್ಪಾದಕರ ಸಂಘಗಳಲ್ಲಿಯೂ ಹಾಲು ಶೀತಲೀಕರಣ ಘಟಕ (ಬಿಎಂಸಿ) ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಕೋಲಾರ–ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ಕೋಚಿಮುಲ್‌) ನಿರ್ದೇಶಕ ಕೆ.ವಿ.ನಾಗರಾಜ್ ಹೇಳಿದರು.

ತಾಲ್ಲೂಕಿನ ಪೋಶೆಟ್ಟಿಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದಿಂದ ವತಿಯಿಂದ ನಿರ್ಮಿಸು ತ್ತಿರುವ ಹಾಲು ಶೀತಲೀಕರಣ ಘಟಕಕ್ಕೆ ಇತ್ತೀಚೆಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ಪ್ರಸ್ತುತ ಚಿಕ್ಕಬಳ್ಳಾಪುರ ತಾಲ್ಲೂಕಿ ನಲ್ಲಿ 11 ಹಾಲು ಶೀತಲೀಕರಣ ಘಟಕಗಳು ಕಾರ್ಯ ನಿರ್ವಹಿಸುತ್ತಿವೆ. ಇದೀಗ ನೂತನವಾಗಿ 3000 ಲೀಟರ್‌ ಸಾಮರ್ಥ್ಯದ 19 ಘಟಕಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಈ ಹೊಸ ವ್ಯವಸ್ಥೆಯಿಂದಾಗಿ ಹಾಲಿನ ಗುಣಮಟ್ಟ ದಲ್ಲಿ ಸುಧಾರಣೆಯಾಗಲಿದೆ’ ಎಂದು ಹೇಳಿದರು. ಪೋಶೆಟ್ಟಿಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.